ಶಿವಮೊಗ್ಗ: ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು.!

 ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಈ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದೆ. ಮತ್ತೊಬ್ಬನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

 ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ಘಟನೆ ಸಂಭವಿಸಿದೆ. ಸಾವಾಯಿ ಪಾಳ್ಯದ ಮೋಯಿನ್ ಖಾನ್ ಮತ್ತು ಇಲಿಯಾಸ್ ನಗರದ ಅಂಜುಂ ಖಾನ್ ಮೀನು ಹಿಡಿಯಲು ತೆರಳಿದ್ದರು. ಇಬ್ಬರು ನೀರುಪಾಲಾಗಿರುವ ಕುರಿತು ಸ್ಥಳೀಯರು ಅಗ್ನಿಶಾಮಕ ಸಿಬ್ಬಂಧಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು.

ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂಧಿ ಶೋಧ ಕಾರ್ಯಾಚರಣೆ ನಡೆಸಿದರು. ಈ ವೇಳೆ ಮೋಯಿನ್ ಖಾನ್ ಮೃತದೇಹ ಪತ್ತೆಯಾಗಿದೆ. ಅದನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಂಜುಂ ಖಾನ್ ಗಾಗಿ ಶೋಧ ಕಾರ್ಯ ಮುಂದುವರೆದಿದೆ.

Post a Comment

Previous Post Next Post