ಶಿವಮೊಗ್ಗದಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಈದ್ ಮಿಲಾದ್ ಮೆರವಣಿಗೆ
Source : Online Desk
ಶಿವಮೊಗ್ಗ: ಶಿವಮೊಗ್ಗದಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಸ್ಥಳಕ್ಕೆ ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ಭೇಟಿ ನೀಡಿ ಗುಂಪನ್ನು ಚದುರಿಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದೆ. ಸ್ಥಳಕ್ಕೆ ಎಸ್ಪಿ ಜಿ.ಕೆ ಮಿಥುನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈದ್ ಮಿಲಾದ್ ಆಚರಣೆ ವೇಳೆ ಕಲ್ಲೆಸೆತ ಉಂಟಾದ ಹಿನ್ನಲೆ ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಶಿವಮೊಗ್ಗದ ಶಾಂತಿನಗರದ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಗೆ ಆದೇಶಿಸಿದ್ದಾರೆ. ಇನ್ನು ಗಲಾಟೆ ವೇಳೆ ಸಿಲುಕಿದ್ದ 7 ಜನರನ್ನು ಪೊಲೀಸರು ರಕ್ಷಿಸಿದ್ದಾರೆ.
ಶಿವಮೊಗ್ಗದ ರಾಗಿಗುಡ್-ಶಾಂತಿನಗರದಲ್ಲಿ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಲಾಗಿದೆ. ಟಿಪ್ಪುವಿನ ಕಟೌಟ್ನ ಕೆಳಭಾಗದಲ್ಲಿ ಆಕ್ಷೇಪಾರ್ಹ ಸಂಗತಿ ಇದ್ದ ಹಿನ್ನಲೆಯಲ್ಲಿ ಪೊಲೀಸರು ಬಿಳಿ ಬಣ್ಣವನ್ನು ಬಳಿದಿದ್ದರು. ಇದರಿಂದ ರೊಚ್ಚಿಗೆದ್ದ ರಾಗಿಗುಡ್ಡದ ಶಾಂತಿನಗರ ನಿವಾಸಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
إرسال تعليق