ದಿನಾಂಕಃ 05-09-2020 ರಂದು ಯಾರೋ ಆಸಾಮಿಗಳು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪುರ ಗ್ರಾಮದಲ್ಲಿ, ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಉಮೇಶ್ ಈಶ್ವರ್ ನಾಯಕ್ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಉಪ ವಿಭಾಗ ರವರು ಸಿಬ್ಬಂಧಿಗಳೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿತರಾದ ರಾಹಿಲ್ ಮತ್ತು ರೋಹನ್ ರವರನ್ನು ದಸ್ತಗಿರಿ ಮಾಡಿ ಅಂದಾಜು ಮೌಲ್ಯ 10,150/- ರೂಗಳ 1,150 ಗ್ರಾಂ ತೂಕದ ಒಣ ಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾದ ಅಂದಾಜು ಮೌಲ್ಯ 16,000/- ರೂಗಳ ದ್ವಿ ಚಕ್ರ ವಾಹನವನ್ನು ಅಮಾನತ್ತು ಪಡಿಸಿಕೊಂಡು ಆರೋಪಿತರ ವಿರುದ್ಧ ಗುನ್ನೆ ಸಂಖ್ಯೆ 0296/2020 ಕಲಂ 8(c), 20(b) (ii) A) NDPS ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಶ್ರೀ ಸುರೇಶ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು ಆರೋಪಿತರಾದ 1) ರಾಹಿಲ್ ಖಾನ್, 22 ವರ್ಷ, ಬಾಪೂಜಿ ನಗರ ಶಿವಮೊಗ್ಗ ಮತ್ತು 2) ರೋಹನ್, 19 ವರ್ಷ, ವಿನೋಬನಗರ ಶಿವಮೊಗ್ಗ ಟೌನ್ ರವರ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಶ್ರೀ ಮಂಜುನಾಥ್ ನಾಯಕ್ ರವರು ದಿನಾಂಕ:06-10-2023 ರಂದು ಆರೋಪಿತರಿಗೆ 02 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ 10,000 /- ರೂ ದಂಡ ವಿಧಿಸಿ ಆದೇಶ ನೀಡಿರುತ್ತಾರೆ.
Post a Comment