ಸರಕಾರದಿಂದ ಸಿಗುವ ಅಲ್ಪಸ್ವಲ್ಪ ನೆರವಿನಿಂದ ಸರಿಯಾಗಿ ಜೀವನ ನಡೆಸಲು ಸಾಧ್ಯವಾಗದೆ ಬರಪೀಡಿತ ಬಳ್ಳಾರಿ ಜಿಲ್ಲೆಯ ಹಲವು ಗ್ರಾಮಗಳ ಜನರು ಕೆಲಸ ಅರಸಿ ನಗರ, ಪಟ್ಟಣಗಳಿಗೆ ವಲಸೆ ಹೋಗುವ ಸಲುವಾಗಿ ತಮ್ಮ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ಮದುವೆ ಮಾಡುವ ಸನ್ನಿವೇಶವಿದೆ.
ಉದ್ಯೋಗದ ಹುಡುಕಾಟದಲ್ಲಿ ಪಟ್ಟಣಗಳು ಮತ್ತು ನಗರಗಳಿಗೆ ವಲಸೆ ಹೋಗುವ ಮೊದಲು, ಅನೇಕ ಪೋಷಕರು ತಮ್ಮ ಅಪ್ರಾಪ್ತ ಹೆಣ್ಣು ಮಕ್ಕಳಿಗೆ ಮದುವೆ ಮಾಡಲು ಪ್ರಯತ್ನಿಸುತ್ತಾರೆ. ಅಧಿಕಾರಿಗಳು ಹಾಗೆ ಮಾಡದಂತೆ ತಡೆದಾಗ, ಅನೇಕರು ತಮ್ಮ ನಿರ್ಧಾರಕ್ಕೆ ಬರಗಾಲ ಕಾರಣ ಎಂದು ಕಷ್ಟ ತೋಡಿಕೊಳ್ಳುತ್ತಾರೆ. ಈ ಪಿಡುಗಿನ ವಿರುದ್ಧ ನಾವು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ. ಇಂತಹ ಘಟನೆಗಳು ಕಂಡುಬಂದಲ್ಲಿ 1098 ಗೆ ಕರೆ ಮಾಡಲು ನಾವು ಜನರನ್ನು ಕೇಳಿದ್ದೇವೆ ಎಂದು ಹೇಳಿದರು.
ಮೇ ತಿಂಗಳಿನಿಂದ ಜಿಲ್ಲೆಯಲ್ಲಿ 61 ಬಾಲ್ಯವಿವಾಹಗಳನ್ನು ತಡೆಗಟ್ಟಲಾಗಿದೆ. ಪೋಷಕರ ವಿರುದ್ಧ ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಇನ್ನೊಬ್ಬ ಅಧಿಕಾರಿ ಹೇಳಿದರು. ಬಾಲ್ಯವಿವಾಹಗಳಿಗೆ ಬರವನ್ನು ಕಾರಣವೆಂದು ಪರಿಗಣಿಸಲಾಗುವುದಿಲ್ಲ. ಇದು ಕಾನೂನಿಗೆ ವಿರುದ್ಧವಾಗಿದೆ. ಈ ಕಾನೂನನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
Post a Comment