ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರೊಂದಿಗೆ ನಿಯಮಿತವಾಗಿ ಉಪಹಾರ ಸಭೆ ನಡೆಸಿ, ಅವರ ಕುಂದುಕೊರತೆಗಳು, ದೂರುಗಳು ಮತ್ತು ಸಲಹೆಗಳನ್ನು ಆಲಿಸುವುದಾಗಿ ಹೇಳಿದ್ದಾರೆ.
ಡಿ.ಕೆ ಶಿವಕುಮಾರ್
ಈ ಕ್ರಮವು ಕೆಲವು ಶಾಸಕರು ಮತ್ತು ಪಕ್ಷದ ಹಿರಿಯ ಕಾರ್ಯಕರ್ತರಲ್ಲಿ ಉಂಟಾಗಿರುವ ಅಸಮಾಧಾನವನ್ನು ತಡೆಗಟ್ಟುವ ಮತ್ತು ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಅವರನ್ನು ಒಂದುಗೂಡಿಸುವ ಗುರಿಯನ್ನು ಹೊಂದಿದೆ.
'ಎಲ್ಲ ಶಾಸಕರಿಗೂ ಸಮಯದ ಬಗ್ಗೆ ಗೊಂದಲವಿತ್ತು. ಬೆಳಗ್ಗೆ 10ರಿಂದ 10.30ರವರೆಗೆ (ಶಾಸಕರಿಗೆ) ಸಮಯ ನಿಗದಿ ಮಾಡಿದ್ದೇನೆ. ನಮ್ಮ ಪಕ್ಷದ ಕಾರ್ಯಕರ್ತರಿಗೂ ಸಮಯ ನಿಗಧಿಗೆ ನಿರ್ಧರಿಸಿದ್ದೇನೆ' ಎಂದು ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ಈ ಸಭೆಗಳು ಶಾಸಕರ ಮತ್ತು ಅವರ ಕ್ಷೇತ್ರಗಳಲ್ಲಿನ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಆಲಿಸುವ ಮತ್ತು ಪರಿಹರಿಸುವ ಗುರಿಯನ್ನು ಹೊಂದಿವೆ ಎಂದು ಅವರು ಹೇಳಿದರು.
ಡಿಕೆ ಶಿವಕುಮಾರ್ ಅವರು ಬೆಂಗಳೂರಿನಿಂದ ಹೊರಗಿರುವ ದಿನಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ದಿನಗಳಲ್ಲಿ ಈ ಸಭೆಗಳು ನಡೆಯುತ್ತವೆ.
إرسال تعليق