ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ರಾಗಿ ಮಾಲ್ಟ್: ಮುಂದಿನ ತಿಂಗಳಿಂದಲೇ ಜಾರಿ!

 ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಿಸಲು ಮುಂದಿನ ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ರಾಗಿ ಮಾಲ್ಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

                                                             ಸಾಂದರ್ಭಿಕ ಚಿತ್ರ

Posted By : Rekha.M
Source : Online Desk

ಬೆಂಗಳೂರು: ಮಕ್ಕಳಲ್ಲಿನ ಅಪೌಷ್ಠಿಕತೆ ನಿವಾರಿಸಲು ಮುಂದಿನ ತಿಂಗಳಿನಿಂದ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ ಜೊತೆಗೆ ರಾಗಿ ಮಾಲ್ಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ), ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒಗಳು), ನೋಡಲ್ ಅಧಿಕಾರಿಗಳು ಮತ್ತು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಗುರುವಾರ ಮೊದಲ ಪರಿಶೀಲನಾ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಶಾಲೆಗಳು ಎರಡು ಮೊಟ್ಟೆಗಳನ್ನು ವಿತರಿಸಲು ಪ್ರಾರಂಭಿಸಿವೆ, ಇದು ವಿದ್ಯಾರ್ಥಿಗಳ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಸಾಬೀತಾಗಿದೆ ಎಂದರು.

ಮುಂದಿನ ಮೂರು ವರ್ಷಗಳಲ್ಲಿ 3,000 ಕರ್ನಾಟಕ ಸಾರ್ವಜನಿಕ ಶಾಲೆಗಳನ್ನು (ಕೆಪಿಎಸ್) ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು.  ಇದಕ್ಕಾಗಿ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ ಬಳಸಲಾಗುವುದು ಮತ್ತು ಇಲಾಖೆಯು ಅಜೀಂ ಪ್ರೇಮ್‌ಜಿ ಫೌಂಡೇಶನ್‌ನೊಂದಿಗೆ ಮಾತುಕತೆ ನಡೆಸುತ್ತಿದೆ. ಈ ಶಾಲೆಗಳ ಮೂಲಸೌಕರ್ಯಕ್ಕಾಗಿ 600 ಕೋಟಿ ರೂಪಾಯಿ ವೆಚ್ಚವನ್ನು ಗುರುತಿಸಲಾಗಿದೆ  ಎಂದು ಮಾಹಿತಿ ನೀಡಿದರು.

ಇದಲ್ಲದೆ, ಒಂದು ಅಥವಾ ಎರಡು ಜಿಲ್ಲೆಗಳಿಗೆ ನಾನು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಶಿಕ್ಷಣವು ರಾಜ್ಯದ ಅತಿದೊಡ್ಡ ಇಲಾಖೆಗಳಲ್ಲಿ ಒಂದಾಗಿದೆ ಮತ್ತು ಸಂಪನ್ಮೂಲಗಳ ಮೂರನೇ ಒಂದು ಭಾಗವನ್ನು ಬಳಸುತ್ತದೆ. ವರ್ಷಾಂತ್ಯದ ವೇಳೆಗೆ ಎಲ್ಲ ಜಿಲ್ಲೆಗಳ ಪರಿಶೀಲನೆ ಪೂರ್ಣಗೊಳಿಸುತ್ತೇನೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಎಲ್) ಪ್ರತಿನಿಧಿಗಳು ಸಭೆಯ ಭಾಗವಾಗಿದ್ದಕ್ಕೆ ಸಂತೋಷವಾಗಿದೆ ಎಂದು ಸಚಿವರು ಹೇಳಿದರು. ಈ ಪ್ರದೇಶವನ್ನು ನಿರ್ಲಕ್ಷಿಸಲಾಗಿದೆ ಎಂದು ನಾವು ಒಪ್ಪಿಕೊಳ್ಳಬೇಕು ಆದರೆ ನಾವು ಅದನ್ನು ಮುಖ್ಯವಾಹಿನಿಗೆ ತರುತ್ತೇವೆ ಮತ್ತು ಇತರ ಪ್ರದೇಶಗಳನ್ನು ಹಿಂದಿಕ್ಕುತ್ತೇವೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

    ಎಸ್‌ಇಪಿಯ ಪ್ರಗತಿಯ ಕುರಿತು ಮಾತನಾಡಿದ ಅವರು, ನಾವು ಎಸ್‌ಇಪಿ ಮೂಲಕ ನಮ್ಮ ರಾಜ್ಯ ಪಠ್ಯಕ್ರಮವನ್ನು ಸುಧಾರಿಸಲು ಪ್ರಯತ್ನಿಸುತ್ತೇವೆ, ಅದನ್ನು ಇತರ ಮಂಡಳಿಗಳಿಗಿಂತ ಉತ್ತಮಗೊಳಿಸುತ್ತೇವೆ, ತಾಂತ್ರಿಕವಾಗಿ ನಾವು ವಿಜ್ಞಾನ ಮತ್ತು ಗಣಿತಕ್ಕೆ ಒಂದೇ ಪಠ್ಯಕ್ರಮವನ್ನು ಅನುಸರಿಸಬೇಕು, ಅದನ್ನು ಬದಲಾಯಿಸಲಾಗುವುದಿಲ್ಲ. ಕೆಲವು ವಿಷಯಗಳಲ್ಲಿ ಮಾತ್ರ ಪಠ್ಯಕ್ರಮವನ್ನು ಬದಲಾಯಿಸಲಾಗುವುದು, ನಾವು ಅದನ್ನು ಹೊಸದಾಗಿ ರಚಿಸಲಾದ ಆಯೋಗಕ್ಕೆ ಬಿಟ್ಟಿದ್ದೇವೆ ಮತ್ತು ವರದಿ ಸಲ್ಲಿಸಿದ ನಂತರ ಹೆಚ್ಚಿನ ಸ್ಪಷ್ಟತೆ ಇರುತ್ತದೆ ಎಂದು ಮಧು ಬಂಗಾರಪ್ಪ ತಿಳಿಸಿದರು.

    ಮನ್ರೇಗಾ ಯೋಜನೆಯಡಿ 7,100 ಶೌಚಾಲಯಗಳನ್ನು ನಿರ್ಮಿಸುವುದು, ಶಾಲೆಗಳಲ್ಲಿ 7,311 ಹೆಚ್ಚುವರಿ ಕೊಠಡಿಗಳ ನಿರ್ಮಾಣ ಹಾಗೂ 13,000 ಶಿಕ್ಷಕರ ನೇಮಕಾತಿ ರಾಜ್ಯದ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಸಕಾರಾತ್ಮಕ ಹೆಜ್ಜೆಯಾಗಿದೆ ಎಂದು ಬಂಗಾರಪ್ಪ  ಅಭಿಪ್ರಾಯ ಪಟ್ಟರು.


    Post a Comment

    أحدث أقدم