ಹೊಸ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮತ್ತು ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದು ಸೇರಿದಂತೆ 16 ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವ...
ಬೆಂಗಳೂರು: ಹೊಸ ಇಂದಿರಾ ಕ್ಯಾಂಟೀನ್ ಗಳ ಸ್ಥಾಪನೆ ಮತ್ತು ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವುದು ಸೇರಿದಂತೆ 16 ವಿಷಯಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಸಚಿವ ಎಚ್. ಕೆ. ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದಾರಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್‌ಕೆ ಪಾಟೀಲ್ ಅವರು, ಇಂದಿನ ಸಚಿವ ಸಂಪುಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಗೋದಾಮುಗಳಿಗೂ ಸಿಸಿಟಿವಿ ಅಳವಡಿಸಲು ತೀರ್ಮಾನಿಸಲಾಗಿದೆ ಎಂದರು.
ಅಂಡರ್ ಗ್ರೌಂಡ್ ಡ್ರೈನೇಜ್(ಯುಜಿಡಿ)ಗೆ ಸಂಬಂಧಿಸಿದ ಸುಮಾರು 16 ವಿಷಯಗಳ ಬಗ್ಗೆ ನಾವು ವಿವರವಾಗಿ ಚರ್ಚಿಸಿದ್ದೇವೆ. ಯುಜಿಡಿಗೆ ಹೆಚ್ಚುವರಿ ಅನುದಾನ ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
"ಅಕ್ರಮ ಗಣಿಗಾರಿಕೆ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆಮತ್ತು ಚಾರ್ಟ್ ಶೀಟ್‌ಗಳನ್ನು ಸಲ್ಲಿಸದಿರುವ ಬಗ್ಗೆ ಸಂಪುಟ ಸಭೆ ತೀವ್ರ ಕಳವಳ ವ್ಯಕ್ತಪಡಿಸಿದೆ. ನಾವು ಶೀಘ್ರವಾಗಿ ಅದನ್ನು ಪರಿಶೀಲಿಸಬೇಕು ಮತ್ತು ತನಿಖೆ ಚುರುಕುಗೊಳಿಸಲು ನಾವು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸಿದ್ದೇವೆ ಎಂದರು.
2008ರಿಂದ 2011ರವರೆಗೆ ನಡೆದಿರುವ ಅಕ್ರಮ ಗಣಿಗಾರಿಕೆ ಹಾಗೂ 2013, 14, 15ರಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ಸಚಿವ ಸಂಪುಟ ಗಮನ ಸೆಳೆದಿದೆ. ಇದರಲ್ಲಿ ತನಿಖೆ ನಿಧಾನಗತಿಯಲ್ಲಿದೆ. ಇನ್ನೂ 188 ಇಂದಿರಾ ಕ್ಯಾಂಟೀನ್‌ಗಳು ಮತ್ತು 4ಜಿ ವಿನಾಯಿತಿ ನೀಡಲು ಸಂಪುಟ ಸಭೆ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದ್ದಾರೆ.
إرسال تعليق