ಶಿವಮೊಗ್ಗ: ಅಪ್ರಾಪ್ತ ವಯ್ಯಸ್ಸಿನ ಬಾಲಕನೊಬ್ಬನು ಪರವಾನಿಗೆ ಇಲ್ಲದೆ ವಾಹನ ಚಾಲನೆ; ವಾಹನದ ಮಾಲೀಕನಿಗೆ ದಂಡ.!

 ದಿನಾಂಕಃ 12-08-2023 ರಂದು ಶ್ರೀ ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ರವರು ಶಿವಮೊಗ್ಗ ಟೌನ್ ಅಶೊಕ ಹೋಟೆಲ್ ನ ಹತ್ತಿರ ವಾಹನ ತಪಾಸಣೆ ಮಾಡುವಾಗ 17 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕನೊಬ್ಬನು  ವಾಹನ ಚಾಲನಾ ಪರವಾನಿಗೆ ಇಲ್ಲದೆ ಕೆಎ14ವೈ4001 ನೋಂದಣಿ ಸಂಖ್ಯೆಯ ದ್ವಿ ಚಕ್ರ ವಾಹನವನ್ನು ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು, ಅಪ್ರಾಪ್ತ ವಯ್ಯಸ್ಸಿನ ಬಾಲಕನಿಗೆ ದ್ವಿ ಚಕ್ರ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ಅಪ್ರಾಪ್ತ ವಯ್ಯಸ್ಸಿನ ಬಾಲಕನ ತಂದೆ ಓಂ ಪ್ರಕಾಶ್, 47 ವರ್ಷ, ಕ್ಲಾರ್ಕ್ ಪೇಟೆ, ಶಿವಮೊಗ್ಗ ಟೌನ್ ಈತನ ವಿರುದ್ಧ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದು, ಘನ 4ನೇ ಎ ಸಿ ಜೆ & ಜೆ ಎಂ ಎಫ್ ಸಿ ನ್ಯಾಯಾಲಯ ಶಿವಮೊಗ್ಗದ ಮಾನ್ಯ ನ್ಯಾಯಾಧೀಶರು ದ್ವಿ ಚಕ್ರ ವಾಹನದ ಮಾಲೀಕರಾದ ಬಾಲಕನ ತಂದೆ ಓಂ ಪ್ರಕಾಶ್  ರವರಗೆ ರೂ 25,000/- ದಂಡ ವಿಧಿಸಿರುತ್ತಾರೆ.



Post a Comment

أحدث أقدم