ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತಿವೆ ಎಂದು ಭಾನುವಾರ ವಾಗ್ದಾಳಿ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಥವಾ ಅದರ ಮಿತ್ರ ಪಕ್ಷ ಜೆಡಿಎಸ್‌ಗೆ ಜನರು ಮತ ನೀಡಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಿದ್ದಾರೆ ಎಂದರು.
ಡಿಕೆಶಿವಕುಮಾರ್
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸುತ್ತಿವೆ ಎಂದು ಭಾನುವಾರ ವಾಗ್ದಾಳಿ ನಡೆಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಥವಾ ಅದರ ಮಿತ್ರ ಪಕ್ಷ ಜೆಡಿಎಸ್‌ಗೆ ಜನರು ಮತ ನೀಡಿದರೆ ಅವರು ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಲಿದ್ದಾರೆ ಎಂದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನ ಅಂಗವಾಗಿ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಕುಮಾರ್, ಬಿಜೆಪಿ ಮತ್ತು ಜೆಡಿಎಸ್ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿದ್ದು, ಅವರು ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದುಗೊಳಿಸುವ ಕಾಯ್ದೆಗೆ ಅನುಮೋದನೆ ನೀಡಬಹುದು. ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರವನ್ನು ಮತದಾರರ ಬಳಿಗೆ ಕೊಂಡೊಯ್ಯಬೇಕು ಮತ್ತು ಎರಡು ಪಕ್ಷಗಳ ಜನವಿರೋಧಿ ಮನಸ್ಥಿತಿಯ ಬಗ್ಗೆ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಪುನರುಚ್ಚರಿಸಿದ ಡಿಸಿಎಂ, ಪ್ರಧಾನಿ ಮೋದಿಯವರು ಕಾಂಗ್ರೆಸ್ ಪರಿಕಲ್ಪನೆಯನ್ನು ಎರವಲು ಪಡೆಯುವ ಮೂಲಕ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ಬಿಜೆಪಿ ಯಾರನ್ನಾದರೂ ತಮ್ಮ ಪಕ್ಷದ ಅಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿ. ನಾವು ಅದರ ಬಗ್ಗೆ ಚಿಂತಿಸುವುದಿಲ್ಲ. ನಮಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ” ಎಂದರು. ಕಾಂಗ್ರೆಸ್ ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರು ಗ್ಯಾರಂಟಿ ಯೋಜನೆಗಳನ್ನು ಪಡೆದುಕೊಳ್ಳುವಲ್ಲಿ ಜನರು ಎದುರಿಸುತ್ತಿರುವ ಅನಾನುಕೂಲತೆಗಳ ಬಗ್ಗೆ ಪಕ್ಷದ ನಾಯಕತ್ವಕ್ಕೆ ತಿಳಿಸಬೇಕು ಎಂದು ಅವರು ಹೇಳಿದರು.
إرسال تعليق