ಶಿವಮೊಗ್ಗ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ; 10,55,000/- ರೂಗಳ ಒಟ್ಟು 17 ದ್ವಿ ಚಕ್ರ ವಾಹನ ವಶ.

 ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ಕಳುವಾದ ಬೈಕ್ ಗಳು ಮತ್ತು ಆರೋಪಿತರ ಪತ್ತೆಗಾಗಿ, ಶ್ರೀ  ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಅನಿಲ್ ಕುಮಾರ್ ಭುಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ  ರವರ ಮಾರ್ಗದರ್ಶನದಲ್ಲಿ, ಶ್ರೀ ಬಾಲರಾಜ್, ಬಿ. ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ರವಿ ಕುಮಾರ್ ಪಿ.ಐ ದೊಡ್ಡಪೇಟೆ ಪೊಲೀಸ್ ಠಾಣೆರವರ ನೇತೃತ್ವದಲ್ಲಿ, ದೊಡ್ಡಪೇಟೆ ಪೊಲೀಸ್ ಠಾಣೆಯ ಶ್ರೀನಿವಾಸ್ ಪಿಎಸ್ಐ , ತಿಮ್ಮಪ್ಪ ಪಿಎಸ್ಐ, ಹೆಚ್.ಸಿ ಪಾಲಾಕ್ಷ ನಾಯ್ಕ್, ಪಿಸಿ ಚಂದ್ರ ನಾಯ್ಕ್ ಪಿ, ಚಂದ್ರಾನಾಯ್ಕ್ ಎಂ, ಹೇಮಂತ್, ಪುನೀತ್, ಮನೋಹರ್, ನಿತಿನ್ ಮತ್ತು ಸುಮಿತ್ರಾ ಬಾಯಿ ರವರುಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿರುತ್ತದೆ. 


ಸದರಿ ತನಿಖಾ ತಂಡವು ದಿನಾಂಕಃ 12-12-2023  ರಂದು ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಒಬ್ಬ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು, ಆತನಿಂದ ದೊಡ್ಡಪೇಟೆ ಪೊಲೀಸ್ ಠಾಣೆಯ 04, ಸಾಗರ ಟೌನ್ ಪೊಲೀಸ್ ಠಾಣೆಯ 01, ಸಕ್ರಾಯಪಟ್ಟಣ ಪೊಲೀಸ್ ಠಾಣೆಯ 01, ರಾಮನಗರ ಟೌನ್ ಪೊಲೀಸ್ ಠಾಣೆಯ 01, ದಾವಣಗೆರೆಯ 04, ಹೊನ್ನಾಳಿಯ 01, ಭದ್ರಾವತಿಯ 01, ಬೈಸೂರಿನ 01, ತಿಪಟೂರಿನ 01, ಹಾಸನದ 01 ಮತ್ತು ಹರಪನಹಳ್ಳಿಯ 01 ಪ್ರಕರಣ ಸೇರಿದಂತೆ ಒಟ್ಟು 17 ದ್ವಿ ಚಕ್ರವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ ಅಂದಾಜು ಮೌಲ್ಯ 10,55,000/- ರೂಗಳ ಒಟ್ಟು 17  ದ್ವಿ ಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. 

ಸದರಿ ತನಿಖಾ ತಂಡದ ಉತ್ತಮವಾದ ಕಾರ್ಯವನ್ನು ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಪ್ರಶಂಸಿಸಿ ಅಭಿನಂದಿಸಿರುತ್ತಾರೆ.

Post a Comment

أحدث أقدم