ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೊರೋನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಇಂದು ಕೋವಿಡ್ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವುದಿಲ್ಲ ಎಂದರು.
ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಗುಂಪು ಸೇರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕೊರೋನಾ ಸೋಂಕಿನ ಬಗ್ಗೆ ಭಯ ಬೇಡ. ಜಾಗೃತಿ ಇರಲಿ. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಯಾವುದೇ ನಿರ್ಬಂಧಗಳನ್ನು ವಿಧಿಸುವುದಿಲ್ಲ ಎಂದು ಸಿಎಂ ಸ್ಪಷ್ಡಪಡಿಸಿದ್ದಾರೆ.
Post a Comment