ವಿಧಾನಸೌಧದ ಸಮೀಪವೇ ಇರುವ ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ ಸಹಾಯವಾಣಿಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಸಂಗ್ರಹ ಚಿತ್ರಬೆಂಗಳೂರು: ವಿಧಾನಸೌಧದ ಸಮೀಪವೇ ಇರುವ ರಾಜಭವನದಲ್ಲಿ ಬಾಂಬ್ ಇರಿಸಿರುವುದಾಗಿ ರಾಷ್ಟ್ರೀಯ ತನಿಖಾ ದಳ ಸಹಾಯವಾಣಿಗೆ ಕರೆ ಮಾಡಿ ಹುಸಿ ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಆರೋಪಿಯನ್ನು ಭಾಸ್ಕರ್ ಎಂದು ಗುರ್ತಿಸಲಾಗಿದೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ನಿವಾಸಿಯಾಗಿದ್ದಾನೆ. ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಬಂದಿದ್ದು ಹಾಗೂ ಪೊಲೀಸರು ತೀವ್ರ ತನಿಖೆ ನಡೆಸುತ್ತಿರುವ ಸುದ್ದಿ ತಿಳಿದಿದ್ದ ಈತ, ಸೋಮವಾರ ಬೆಂಗಳೂರಿಗೆ ಬಂದಿದ್ದ. ಈ ವೇಳೆ ಬೆಂಗಳೂರು ಪೊಲೀಸರನ್ನು ಆಟವಾಡಿಸಬೇಕೆಂದು ನಿರ್ಧರಿಸಿ ಬೆದರಿಕೆ ಕರೆ ಮಾಡಿದ್ದಾನೆಂದು ತಿಳಿದುಬಂದಿದೆ.
ಪೊಲೀಸರ ಆಟವಾಡಿಸಲು ಗೂಗಲ್ ನಲ್ಲಿ ಸರ್ಚ್ ಮಾಡಿ ಎನ್ಐಎ ನಂಬರ್ ಪಡೆದುಕೊಂಡಿದ್ದಾನೆ. ನಂತರ ರಾಜಭವನಕ್ಕೆ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದಾರೆ. ಬೆದರಿಕೆ ಕರೆಯಿಂದ ಗಾಬರಿಯಾದ ಎನ್ಐಎ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ನಡುವೆ ಆರೋಪಿ ಬೆಂಗಳೂರಿನಿಂದ ನೇರವಾಗಿ ಆಂಧ್ರದ ಚಿತ್ತೂರಿನ ದೇವಸ್ಥಾನವೊಂದಕ್ಕೆ ತೆರಳಿದ್ದಾನೆ. ಬಾಂಬ್ ಬೆದರಿಕೆ ಕರೆ ಬಂದಿದ್ದ ಫೋನ್ ನಂಬರ್'ನ ನೆಟ್ವರ್ಕ್ ಟ್ರ್ಯಾಕ್ ಮಾಡುತ್ತಿದ್ದ ಪೊಲೀಸರು, ಆರೋಪಿ ಭಾಸ್ಕರ್ ನನ್ನು ಬಂಧನಕ್ಕೊಳಪಡಿಸಿದ್ದಾರೆ. ಈ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಸೋಮವಾರ ರಾತ್ರಿ 11.30ರ ಸುಮಾರಿಗೆ ನಗರದ ದೊಮ್ಮಲೂರಿನಲ್ಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಚೇರಿಯ ನಿಯಂತ್ರಣ ಕೊಠಡಿಗೆ ಅನಾಮಧೇಯ ಕರೆ ಮಾಡಿ ರಾಜಭವನದ ಆವರಣದಲ್ಲಿಟ್ಟಿರುವ ಬಾಂಬ್ ಕೆಲವೇ ಕ್ಷಣಗಳಲ್ಲಿ ಎಂದು ತಿಳಿಸಿ ಕರೆಯನ್ನು ಸ್ಥಗಿತಗೊಳಿಸಿದ್ದಾನೆ.
ಕರೆ ಬಂದ ಕೂಡಲೇ ಪೊಲೀಸರಿಗೆ ಮಾಹಿತಿ ರವಾನಿಸಿದ್ದ ಎನ್‌ಐಎ ಅಕಾರಿಗಳು ಸ್ಥಳೀಯ ಪೊಲೀಸರಿಗೂ ಮಾಹಿತಿ ರವಾನಿಸಿದ್ದಾರೆ. ನಂತರ 12 ಗಂಟೆ ಸುಮಾರಿಗೆ ಪೊಲೀಸರು, ಬಾಂಬ್ ನಿಷ್ಕ್ರೀಯ ದಳ, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳಕ್ಕೆ ಧಾವಿಸಿ ರಾಜಭವನದ ಸುತ್ತಮುತ್ತಾ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ದೊರೆತಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್ ಕರೆ ಎಂಬುದು ತಿಳಿದುಬಂದಿತ್ತು.
Post a Comment