ಬಗರ್ ಹುಕುಂ ಅರ್ಜಿ ಸಲ್ಲಿಕೆ ಇನ್ನು ಸುಲಭ: ಆ್ಯಪ್ ಬಿಡುಗಡೆ ಮಾಡಿದ ಸಚಿವ ಕೃಷ್ಣ ಬೈರೇಗೌಡ

 ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ.

ಕೃಷ್ಣ ಬೈರೇಗೌಡ

Posted By : Rekha.M
Source : Online Desk

ಬೆಂಗಳೂರು: ರಾಜ್ಯ ಸರ್ಕಾರ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್‌ ಬಿಡುಗಡೆ ಮಾಡಿದೆ.  ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ.

ಆಪ್ ಬಿಡುಗಡೆ ಮಾಡಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ. ಹೀಗಾಗಿ ಬಗರ್ ಹುಕುಂ ತಂತ್ರಾಶ ಬಳಸಿ ಅರ್ಜಿ ವಿಲೇ ಮಾಡಲಾಗುತ್ತದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಹಾಗೂ ಅರ್ಜಿಗಳ ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.

    ಗ್ರಾಮ ಲೆಕ್ಕಿಗ ಸ್ಥಳಕ್ಕೆ ತೆರಳಿ ಈ ಆ್ಯಪ್ ಮೂಲಕ ಜಿಯೋ ಫೆನ್ಸ್ ಮಾಡಿ ಆ ಮಾಹಿತಿಯನ್ನು ಕಂದಾಯ ನಿರೀಕ್ಷಕ ಹಾಗೂ ಸರ್ವೇ ಇಲಾಖೆ ಲಾಗಿನ್‌ಗೆ ಕಳುಹಿಸುತ್ತಾರೆ. ಇದರ ಸಹಾಯದಿಂದ ತಹಶೀಲ್ದಾರ್‌ ಸ್ಯಾಟಲೈಟ್ ಇಮೇಜ್ ಪಡೆದು ನಿಜಕ್ಕೂ ಅಲ್ಲಿ ಕೃಷಿ ನಡೆಸುತ್ತಿದ್ದಾರ ಎಂಬ ಮಾಹಿತಿ ಕಲೆಹಾಕುತ್ತಾರೆ. ಅಲ್ಲದೆ ಆ ಇಮೇಜ್ ಜೊತೆಗೆ ಎಲ್ಲಾ ಮಾಹಿತಿಯನ್ನು ಬಗರ್ ಹುಕುಂ ಕಮಿಟಿ ಮುಂದೆ ಸಲ್ಲಿಸಿ ಓಟಿಪಿ ಮೂಲಕ ಕೆವೈಸಿ ಮಾಡುವ ಮೂಲಕ ಋಜುವಾತು ಮಾಡುತ್ತಾರೆ. ಈ ಮೂಲಕ ಅಕ್ರಮ ಸಕ್ರಮ ಆಗುವುದಲ್ಲದೇ ಅಧಿಕಾರಿಗಳ ಕೆಲಸವೂ ಸುಲಭವಾಗಲಿದ್ದು ಭೂ ದಾರರಿಗೂ ಸಹಾಯ ಆಗಲಿದೆ ಎಂದು ಹೇಳಿದ್ದಾರೆ.



    Post a Comment

    أحدث أقدم