ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವರ್ ಅವರನ್ನು ಪ್ರಶ್ನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಬಿಜೆಪಿ ಕಾರ್ಯಕರ್ತನ ಮೇಲೆ ಆರು ಮಂದಿಯಿದ್ದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಸೋಮವಾರ ಶಿವಮೊಗ್ಗ ಜಿಲ್ಲೆಯಲ್ಲಿ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವರ್ ಅವರನ್ನು ಪ್ರಶ್ನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಬಿಜೆಪಿ ಕಾರ್ಯಕರ್ತನ ಮೇಲೆ ಆರು ಮಂದಿಯಿದ್ದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಸೋಮವಾರ ಶಿವಮೊಗ್ಗ ಜಿಲ್ಲೆಯಲ್ಲಿ ವರದಿಯಾಗಿದೆ.
ಬಿಜೆಪಿ ಕಾರ್ಯಕರ್ತ ಗೋಕುಲ್ ಕೃಷ್ಣನ್ ಅವರ ಹಣೆ ಮತ್ತು ಕಿವಿಗೆ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿ ಪಟ್ಟಣದ ಕಾಂಚನ್ ಹೋಟೆಲ್‌ನಿಂದ ಭಾನುವಾರ ರಾತ್ರಿ ಊಟ ಪಾರ್ಸಲ್ ತರಲು ತೆರಳಿದ್ದ ವೇಳೆ ಗುಂಪು ಹಲ್ಲೆ ನಡೆಸಿದೆ.
ಸ್ಥಳೀಯ ಕಾಂಗ್ರೆಸ್ ಶಾಸಕ ಸಂಗಮೇಶ್ವರ್ ಅವರನ್ನು ಪ್ರಶ್ನಿಸಿದ ಹಿನ್ನೆಲೆಯಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಗೋಕುಲ್ ಕೃಷ್ಣನ್ ಸೋಮವಾರ ಹೇಳಿಕೆ ನೀಡಿದ್ದಾರೆ. ಭದ್ರಾವತಿ ಪಟ್ಟಣದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಹಾಗೂ ಎಂಪಿಎಂಎಲ್ ಕಾರ್ಖಾನೆ ಪುನರಾರಂಭಿಸುವ ಭರವಸೆ ನೀಡಿರುವ ಬಗ್ಗೆ ಸಂತ್ರಸ್ತ ಕಾಂಗ್ರೆಸ್ ಶಾಸಕರನ್ನು ಪ್ರಶ್ನಿಸಿದ್ದರು. ಈ ಪೋಸ್ಟ್ ನಂತರ, ಸಂತ್ರಸ್ತರ ಕಾರಿಗೆ ಶನಿವಾರ ಹಾನಿಯುಂಟುಮಾಡಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿರುವ ಹೊಸನಗರ ಪೊಲೀಸರು ಈ ಸಂಬಂಧ ಮೂವರನ್ನು ಬಂಧಿಸಿದ್ದಾರೆ. ಅವರನ್ನು ಗಣೇಶ್ (22), ಹರ್ಷ (22) ಮತ್ತು ನಾಗೇಗೌಡ (22) ಎಂದು ಗುರುತಿಸಲಾಗಿದೆ.
ಈ ಪ್ರಕರಣ ಪ್ರಮುಖ ವಿಷಯವಾಗಿ ಪರಿಣಮಿಸಿ ಅಧಿವೇಶನದಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ. ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್‌ಗೆ ಚಾಕುವಿನಿಂದ ಇರಿದಿದ್ದು, ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿ, ಅವರ ನಾಲ್ವರು ಸಹಚರರು ಮತ್ತು ಅವರ ಇಬ್ಬರು ಗನ್‌ಮ್ಯಾನ್‌ಗಳ ವಿರುದ್ಧ ಎಫ್‌ಐಆರ್ ದಾಖಲಾಲಾಗಿದೆ. ಪೃಥ್ವಿ ಸಿಂಗ್ ಅವರು ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ನಿಕಟವರ್ತಿಯಾಗಿದ್ದರು.
Post a Comment