ವಯೋಸಹಜ ಅನಾರೋಗ್ಯದಿಂದ ನಟಿ ಲೀಲಾವತಿ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ.
ನಟಿ ಲೀಲಾವತಿ
ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ನಟಿ ಲೀಲಾವತಿ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ.
ಬೆಳಿಗ್ಗೆ 5:30 ಕ್ಕೆ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ನಟಿ ಲೀಲಾವತಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಡಿ.08 ರಂದು ಸಂಜೆ ಕೊನೆಯುಸಿರೆಳೆದರು. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಅಂತಿಮ ನಮನ ಸಲ್ಲಿಸಲಿದ್ದು, ಮಧ್ಯಾಹ್ನ 3 ಗಂಟೆ ಬಳಿಕ ಸೋಲದೇವನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.
1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ರಾಜ್ಕುಮಾರ್, ವಿಷ್ಣುವರ್ಧನ್ ಮುಂತಾದವರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
Post a Comment