ರಾಮಮಂದಿರ ಉದ್ಘಾಟನೆ: ಜನವರಿ 22ರಂದು ಉತ್ತರಪ್ರದೇಶದಲ್ಲಿ ಮಾಂಸ, ಮೀನು ಮಾರಾಟ ನಿಷೇಧಿಸಿದ ಯೋಗಿ ಸರ್ಕಾರ!

 ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈಗಾಗಲೇ ಜನವರಿ 22ರಂದು ಮದ್ಯ ಮಾರಾಟವನ್ನು ನಿಷೇಧಿಸಿದ್ದು ಇದೀಗ ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22ರಂದು ರಾಜ್ಯದಲ್ಲಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಗುರುವಾರ ಘೋಷಿಸಿದೆ.

                                                        ಯೋಗಿ ಆದಿತ್ಯನಾಥ

Posted By : Rekha.M
Source : Online Desk

ಲಖನೌ: ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈಗಾಗಲೇ ಜನವರಿ 22ರಂದು ಮದ್ಯ ಮಾರಾಟವನ್ನು ನಿಷೇಧಿಸಿದ್ದು ಇದೀಗ ರಾಮಮಂದಿರ ಉದ್ಘಾಟನೆ ದಿನವಾದ ಜನವರಿ 22ರಂದು ರಾಜ್ಯದಲ್ಲಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸಿರುವುದಾಗಿ ಉತ್ತರ ಪ್ರದೇಶ ಸರ್ಕಾರ ಗುರುವಾರ ಘೋಷಿಸಿದೆ.

ಜನವರಿ 22 ರಂದು ರಾಮ ಮಂದಿರದ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ರಾಮ್ ಲಾಲಾ ಪಟ್ಟಾಭಿಷೇಕ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸಹ ಅನೇಕರೊಂದಿಗೆ ವೇದಿಕೆ ಹಂಚಿಕೊಳ್ಳಲಿದ್ದಾರೆ.

ಜನವರಿ 22ರಂದು ಮಧ್ಯಾಹ್ನ 12.20ಕ್ಕೆ 'ಪ್ರಾಣ ಪ್ರತಿಷ್ಠೆ'
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನಿಂದ 7,000ಕ್ಕೂ ಹೆಚ್ಚು ಜನರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ. ವಾರಣಾಸಿಯ ಅರ್ಚಕ ಲಕ್ಷ್ಮೀಕಾಂತ್ ದೀಕ್ಷಿತ್ ಅವರು ಮಧ್ಯಾಹ್ನ 12.20 ಕ್ಕೆ 'ಪ್ರಾಣ ಪ್ರತಿಷ್ಠಾ' ಸಮಾರಂಭವನ್ನು ನೆರವೇರಿಸುವರು. ಸಮಾರಂಭವು ಜನವರಿ 22ರಂದು ಮಧ್ಯಾಹ್ನ 1 ಗಂಟೆಗೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ತಯಾರಿಸಿರುವ ರಾಮಲಲ್ಲಾ ಮೂರ್ತಿಯನ್ನು ಪ್ರತಿಷ್ಠಾಪನೆಗೆ ಆಯ್ಕೆ ಮಾಡಲಾಗಿದೆ. ಮಹಾಮಸ್ತಕಾಭಿಷೇಕದ ಏಳು ದಿನಗಳ ಧಾರ್ಮಿಕ ವಿಧಿ ಮಂಗಳವಾರದಿಂದ ಆರಂಭವಾಗಿದೆ. ಆಚರಣೆಗಳು ವಿವಿಧ ರೀತಿಯ ಪೂಜೆಗಳನ್ನು ಒಳಗೊಂಡಿವೆ. ಜನವರಿ 21ರಂದು ರಾಮಲಾಲಾ ವಿಗ್ರಹಕ್ಕೆ 125 ಕಲಶಗಳಿರುವ ದೈವಿಕ ಸ್ನಾನವನ್ನು ನೀಡಲಾಗುತ್ತದೆ.


Post a Comment

أحدث أقدم