ವಿವೇಕಾನಂದರ ಜನ್ಮ ದಿನದಂದೇ ಯೋಜನೆ ಜಾರಿಯಾಗುತ್ತಿದೆ. ವಾರ್ಷಿಕ ಸುಮಾರು 250 ಕೋಟಿ ಅನುದಾನ ಅಗತ್ಯವಿದೆ. ಈ ಬಗ್ಗೆ ಸಿಎಂ ಬಳಿ ಅನುದಾನ ಕೋರಲಾಗಿದೆ. ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಜಾರಿಗೊಳಿಸಿಲ್ಲ. ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಹುಸಿಯಾಗಿದೆ. ಅದಕ್ಕಾಗಿ ನಮ್ಮ ಪಕ್ಷ ಈ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ.ನುಡಿದಂತೆ ನಡೆದಿದ್ದೇವೆ.
ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗಲೂ ನುಡಿದಂತೆ ನಡೆದಿದ್ದೇವೆ. ಪ್ರಣಾಳಿಕೆಯಲ್ಲಿ ನೀಡಿದ್ದ ಎಲ್ಲಾ ಭರವಸೆಯನ್ನು ಈಡೇರಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸುದ್ದಿ ಗೋಷ್ಠಿ. ಕಾಂಗ್ರೆಸ್ ಗ್ಯಾರಂಟಿ ಮೂಲಕ ಪ್ರತಿ ಗ್ರಾಮ ಪಂಚಾಯಿತಿಗೆ ಪ್ರತಿ ತಿಂಗಳು ಕನಿಷ್ಠ 75 ಲಕ್ಷ ತಲುಪುತ್ತಿದೆ. ಆದರೂ ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರ ಆರೋಪಕ್ಕೆ ಉತ್ತರಿಸಲು ಹೋಗುವುದಿಲ್ಲ. ನಮ್ಮ ಕಾರ್ಯಕ್ರಮದ ಮೂಲಕ ಉತ್ತರಿಸುತ್ತೇವೆ
ನಮ್ಮ 4 ಗ್ಯಾರಂಟಿ ಯೋಜನೆಯ ಲಾಭ ಈಗಾಗಲೇ ಜನರಿಗೆ ತಲುಪಿದೆ. ಇದೀಗ 5ನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆಯನ್ನು ಜಾರಿ ಮಾಡುತ್ತಿದ್ದೇವೆ. ಜನವರಿ 12 ರಂದು ಶಿವಮೊಗ್ಗದಲ್ಲಿ ಸಿಎಂ ಉದ್ಘಾಟಿಸಲಿದ್ದಾರೆ. ಸುಮಾರು ಒಂದೂವರೆ ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಸುಮಾರು 5 ಲಕ್ಷ ಜನರಿಗೆ ನೇರವಾಗಿ ಯುವ ನಿಧಿ ವರ್ಗಾವಣೆ ಆಗಲಿದೆ.
ಸಿಎಂ ಜೊತೆಗೆ ಡಿಸಿಎಂ ಹಾಗೂ ವಿವಿಧ ಇಲಾಖೆಯ ಸಚಿವರು ಆಗಮಿಸಲಿದ್ದಾರೆ. ಹಾಗೆಯೇ ನೆರೆಯ ಜಿಲ್ಲೆಗಳಿಂದ ಫಲಾನುಭವಿಗಳು ಆಗಮಿಸಲಿದ್ದಾರೆ. ಪಕ್ಷ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಬಿಜೆಪಿಯವರು ಭಾವನಾತ್ಮಕ ವಿಷಯಗಳನ್ನು ಪ್ರಸ್ತಾಪಿಸುತ್ತಾರೆ. ಆದರೆ ಒಂದೇ ಒಂದು ಯೋಜನೆಯಿಂದ ಜನರಿಗೆ ಪ್ರಯೋಜನವಾಗಿಲ್ಲ.
ಉಜ್ವಲಾ ಯೋಜನೆಯಡಿ ನೀಡಿದ್ದ ಗ್ಯಾಸ್ ಸೌಲಭ್ಯ ಸಿಗುತ್ತಿಲ್ಲ. ಆದರೆ ನಮ್ಮ ಯೋಜನೆಯ ಲಾಭ ಎಲ್ಲರಿಗೂ ಸಿಗುತ್ತಿದೆ. ಗಣರಾಜ್ಯೋತ್ಸವದಲ್ಲಿ ಟ್ಯಾಬ್ಲೋ ಗೆ ಅಷ್ಟೇ ಅಲ್ಲ ಪ್ರತಿಯೊಂದು ವಿಷಯದಲ್ಲೂ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ತೆರಿಗೆ ಹಂಚಿಕೆಯಲ್ಲೂ ಅನ್ಯಾಯವಾಗುತ್ತಿದೆ. ರಾಜ್ಯದ 25 ಜನ ಬಿಜೆಪಿ ಸಂಸದರು ಮೌನವಾಗಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೇ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಹೀಗೆ ಮಾಡುತ್ತಿದೆ. ರಾಜ್ಯದ ಜನಕ್ಕೆ ಕೇಂದ್ರ ತಾರತಮ್ಯ ಅರ್ಥವಾಗಿದೆ. ಬಿಜೆಪಿಗೆ ನಮ್ಮ ಜನಪ್ರಿಯತೆ. ಸಹಿಸಿಕೊಳ್ಳಲಾಗುತ್ತಿಲ್ಲಬಡವರಿಗಾಗಿ ರೂಪಿಸಿದ ಕಾರ್ಯಕ್ರಮದಿಂದ ಅವರಿಗೆ ಭಯ ಕಾಡುತ್ತಿದೆ. ಏಕೆಂದರೆ ಅವರು ನೇರವಾಗಿ ಅಧಿಕಾರಕ್ಕೆ ಬರಲಿಲ್ಲ. ಮೋಸ ಮಾಡಿ ಅಧಿಕಾರಕ್ಕೆ ಬಂದರು. ಹಾಗಾಗಿ ಅವರಿಗೆ ಜನ ಈ ಬಾರಿ ಅಧಿಕಾರದಿಂದ ದೂರವಿಟ್ಟಿದ್ದಾರೆ. ಯುವ ನಿಧಿ ಯೋಜನೆಯನ್ನು ಯುವ ಜನತೆಗೆ ಅನುಕೂಲಕ್ಕಾಗಿ ರೂಪಿಸಲಾಗಿದೆ
إرسال تعليق