ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ದಾಳಿ ನಡೆಸಿದ್ದು, 44 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಸಂಗ್ರಹ ಚಿತ್ರಬೆಂಗಳೂರು: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ದಾಳಿ ನಡೆಸಿದ್ದು, 44 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಹುಮಹಡಿಯ ಕಟ್ಟಡವೊಂದರ 1 ಮತ್ತು 6ನೇ ಅಂತಸ್ತಿನಲ್ಲಿ ಅನಿಲ್ ಎಬಾತ ನಿರ್ವಾಣ ಇಂಟರ್ ನ್ಯಾಷನಲ್ ಸ್ಪಾ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಸ್ಪಾ ನಡೆಸುತ್ತಿದ್ದ. ಈ ಸ್ಪಾದಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳ ಯುವತಿಯರು, ಮಹಿಳೆಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂಬ ಆರೋಪ ಕೇಳಿ ಬಂದಿತ್ತು.
ಇದರಂತೆ ಶನಿವಾರ ತಡರಾತ್ರಿ ಸಿಸಿಬಿ ಪೊಲೀಸರು ಸ್ಪಾ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದಾಗ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ.
ದಾಳಿ ವೇಳೆ 44 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಅಂತೆಯೇ ಸ್ಪಾ ಮಾಲೀಕ ಅನಿಲ್ ಸೇರಿ 34 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಆರೋಪಿಗಳು ಉದ್ಯೋಗ, ಹೆಚ್ಚಿನ ದುಡ್ಡಿನ ಆಸೆ ತೋರಿಸಿ ರಾಜ್ಯ ಹಾಗೂ ಹೊರರಾಜ್ಯಗಳಿಂದ ಯುವತಿಯರನ್ನು ಕರೆಸಿಕೊಂಡು ಬಳಿಕ ಒತ್ತಾಯಪೂರ್ವಕವಾಗಿ ವೇಶ್ಯಾವಾಟಿಕೆ ದಂಧೆಗೆ ನೂಕಿ ಅಕ್ರಮವಾಗಿ ಹಣ ಸಂಪಾದಿಸುತ್ತಿದ್ದರು ಎಂಬುದು ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
إرسال تعليق