ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧಾರ!

 ರಾಮನೂರು ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕ ಯಾತ್ರಿ ನಿವಾಸ ತಲೆ ಎತ್ತಲಿದೆ.  ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು ಅಯೋಧ್ಯೆಗೆ ಆಗಮಿಸಲಿದ್ದು, ಇವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕರ್ನಾಟಕ ಮುಜರಾಯಿ ಇಲಾಖೆ ಪತ್ರ ಬರೆದಿದೆ.

                                 ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ

Posted By : Rekha.M
Source : Online Desk

ಬೆಂಗಳೂರು: ಅಯೋಧ್ಯೆಯಲ್ಲಿ ಭವ್ಯ ಶ್ರೀ ರಾಮಮಂದಿರ ನಿರ್ಮಾಣವಾಗಿದ್ದು ಜನವರಿ 22 ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಅಯೋಧ್ಯೆಗೆ  ತೆರಳಬೇಕು ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರನ  ದರ್ಶನ  ಪಡೆಯಬೇಕು ಎಂಬುದು ಅನೇಕ ಭಕ್ತರ ಆಸೆಯಾಗಿದೆ. ಹೀಗೆ ಕರ್ನಾಟಕದಿಂದ ಅಯೋಧ್ಯೆಗೆ ಹೋಗುವ ಭಕ್ತರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್​ ನೀಡಿದೆ.

ರಾಮನೂರು ಅಯೋಧ್ಯೆಯಲ್ಲಿ ಕನ್ನಡಿಗರಿಗಾಗಿ ಕರ್ನಾಟಕ ಯಾತ್ರಿ ನಿವಾಸ ತಲೆ ಎತ್ತಲಿದೆ. ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರಿಗಳು ಅಯೋಧ್ಯೆಗೆ ಆಗಮಿಸಲಿದ್ದು, ಇವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕರ್ನಾಟಕ ಮುಜರಾಯಿ ಇಲಾಖೆ ಪತ್ರ ಬರೆದಿದೆ.

ಕರ್ನಾಟಕದಿಂದ ಬರುವ ಭಕ್ತರಿಗೆ ಸರಯೂ ನದಿ ಸಮೀಪದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2023ರ ಅಗಸ್ಟ್​​​ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದಕ್ಕೂ ಮುನ್ನ 2020ರಲ್ಲಿ ಬಿಎಸ್​ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದರು.

ರಾಜ್ಯದ ಮನವಿಗೆ ಉತ್ತರ ಪ್ರದೇಶ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ಪತ್ರ ಕಳುಹಿಸಿದೆ. ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿ ನಡೆಯುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ ಹೂಡಲು ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಇನ್ನೊಂದು ವರ್ಷದಲ್ಲಿ ರಾಮಮಂದಿರದ ಬಳಿ ಅತಿಥಿ ಗೃಹ ತಲೆ ಎತ್ತಲಿದೆ. ರಾಜ್ಯದ ಭಕ್ತಾದಿಗಳ ಅನುಕೂಲಕ್ಕೆ ಸರಯೂ ನದಿ ಸಮೀಪದಲ್ಲಿ ಐದು ಎಕರೆ ಜಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಮುಜರಾಯಿ ಇಲಾಖೆ ಅತಿಥಿ ಗೃಹ ನಿರ್ಮಿಸುತ್ತಿದೆ ಎಂದು ತಿಳಿಸಿದೆ.

ಒಟ್ಟಾರೆ ಅಯೋಧ್ಯೆಗೆ ರಾಮನ ದರ್ಶನಕ್ಕೆ ಹೋಗುವ ಕನ್ನಡಿಗರಿಗೆ ಅನುಕೂಲವಾಗುವಂತೆ ನಮ್ಮ ಸರ್ಕಾರ ಕಾರ್ಯಪ್ರವೃತ್ತವಾಗಿರೋದು ಖುಷಿ ವಿಚಾರ. ರಾಮಮಂದಿರದ ಬಳಿ ಸರಯೂ ನದಿಯ ಸಮೀಪದಲ್ಲೇ ನಮ್ಮ ಕರ್ನಾಟಕ ಅತಿಥಿ ಗೃಹ ನಿರ್ಮಾಣವಾಗಿ, ಆದಷ್ಟು ಬೇಗ ಕನ್ನಡಿಗರಿಗೆ ಸಿಗುವಂತಾಗಲಿ ಎಂಬುದೇ ಎಲ್ಲರ ಆಶಯವಾಗಿದೆ.




Post a Comment

أحدث أقدم