ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮಂಗಳವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇಂದು ಅವರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಕ್ವಾರಂಟೈನ್ ಭೀತಿ ಎದುರಾಗಿದೆ.
ರಾಜ್ಯಪಾಲರನ್ನು ಭೇಟಿಯಾದ ಬಿಜೆಪಿ ನಿಯೋಗ
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮಂಗಳವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಇಂದು ಅವರನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗಕ್ಕೆ ಕ್ವಾರಂಟೈನ್ ಭೀತಿ ಎದುರಾಗಿದೆ.
ರಾಜ್ಯಪಾಲರು ತಮಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ರಾಜಭವನದಲ್ಲಿಯೇ ಕ್ವಾರಂಟೈನ್ ಆಗಿದ್ದು, ಮುಂದಿನ ದಿನಾಂಕದವರೆಗೆ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ.
ಸದ್ಯ ರಾಜ್ಯಪಾಲರ ಆರೋಗ್ಯ ಸ್ಥಿರವಾಗಿದ್ದು, ಅವರು ಮನೆಯಲ್ಲಿಯೇ ಕ್ವಾರಂಟೈನ್‌ನಲ್ಲಿದ್ದಾರೆ. ವೈದ್ಯರು ಸೂಕ್ತ ಚಿಕಿತ್ಸೆಯೊಂದಿಗೆ ನಿಗಾವಹಿಸಿ ಆರೈಕೆ ಮಾಡುತ್ತಿದ್ದಾರೆ. ಮುಂದಿನ ಕೆಲ ದಿನಗಳ ಕಾಲ ರಾಜ್ಯಪಾಲರ ಭೇಟಿ ಹಾಗೂ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ರಾಜ್ಯಪಾಲರ ಕಚೇರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಮಧ್ಯೆ ಇಂದು ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ, ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಗಳಾದ ಬಸವರಾಜ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಮಾಜಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ, ಮಾಜಿ ಸಚಿವ ಕೆ. ಗೋಪಾಲಯ್ಯ, ಶಾಸಕಾರದ ಎಸ್ ರಘು, ರವಿ ಸುಬ್ರಮಣ್ಯ, ಕೆ. ರಾಮಮೂರ್ತಿ ಹಾಜರಿದ್ದರು. ರಾಜ್ಯಪಾಲರ ಭೇಟಿ ಬಳಿಕ ಕೊರೋನಾ ವರದಿ ಬಂದಿದ್ದು, ಬಿಜೆಪಿ ನಾಯಕರ ಆತಂಕಕ್ಕೆ ಕಾರಣವಾಗಿದೆ.
Post a Comment