ಮಾದಕ ವಸ್ತು ಗಾಂಜಾ ಮಾರಾಟಗಾರರ ವಿರುದ್ಧ ಕ್ರಮ ಜರುಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ, ದಿನಾಂಕ: 03-01-2024 ರಂದು ಮಧ್ಯಾಹ್ನ ಭದ್ರಾವತಿ ಹೊಸಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ನಗರ ಲೇ ಔಟ್ ನಲ್ಲಿ, ಅಪರಿಚಿತರು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ, ಐಪಿಎಸ್ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ ಜಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ, ಶ್ರೀ ನಾಗರಾಜ್, ಡಿ.ವೈ.ಎಸ್.ಪಿ ಭದ್ರಾವತಿ ಉಪ ವಿಭಾಗ ಮತ್ತು ಶ್ರೀಶೈಲ್ ಸಿಪಿಐ ಭದ್ರಾವತಿ ನಗರ ವೃತ್ತ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ಕೃಷ್ಣ ಕುಮಾರ್ ಬಿ ಮಾನೆ, ಪಿಎಸ್ಐ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ರವರ ನೇತೃತ್ವದಲ್ಲಿ ಸಿಬ್ಬಂಧಿಗಳನ್ನೊಳಗೊಂಡ ತಂಡವು ಸ್ಥಳಕ್ಕೆ ಹೋಗಿ ದಾಳಿ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ಮತ್ತು ಮಾರಕಾಸ್ತ್ರಗಳನ್ನು ತೋರಿಸುತ್ತಾ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಆರೋಪಿತರಾದ 1) ಮಹಮ್ಮದ್ ಗೌಸ್, 23 ವರ್ಷ, ಅನ್ವರ್ ಕಾಲೋನಿ ಭದ್ರಾವತಿ ಮತ್ತು 2) ಮಹಮ್ಮದ್ ಮುಸ್ತಫಾ, 24 ವರ್ಷ, ಅನ್ವರ್ ಕಾಲೋನಿ ಭದ್ರಾವತಿ ಇವರನ್ನು ದಸ್ತಗಿರಿ ಮಾಡಿ, ಆರೋಪಿತರಿಂದ ಅಂದಾಜು ಮೌಲ್ಯ 15,000/- ರೂಗಳ 375 ಗ್ರಾಮ ತೂಕದ ಒಣ ಗಾಂಜಾ, ರೂ 1,000/- ನಗದು ಹಣ ಮತ್ತು 02 ಚಾಕುಗಳನ್ನು ಅಮಾನತ್ತು ಪಡಿಸಿಕೊಂಡು, ಆರೋಪಿತರ ವಿರುದ್ಧ ಗುನ್ನೆ ಸಂಖ್ಯೆ 0001/2024 ಕಲಂ 20(b) (ii) A NDPS ಮತ್ತು 25(1A) Indian Arms Act ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದೆ.
Post a Comment