ದಿನಾಂಕ 17-01-2024 ರಂದು ಮಧ್ಯಾಹ್ನ ಇನ್ನೋವಾ ಕಾರಿನಲ್ಲಿ ಗಾಜನೂರು ಕಡೆಯಿಂದ ಶಿವಮೊಗ್ಗ ನಗರದ ಕಡೆಗೆ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಮತ್ತು ಶ್ರೀ ಕಾರಿಯಪ್ಪ ಎ ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರವರ ಮಾರ್ಗದರ್ಶನದಲ್ಲಿ ಶ್ರೀ ಬಾಲರಾಜ್ ಬಿ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಎ ಉಪ ವಿಭಾಗ ರವರ ಮೇಲ್ವಿಚಾರಣೆಯಲ್ಲಿ, ಶ್ರೀ ರವಿ ಪಾಟೀಲ್, ಪಿಐ ದೊಡ್ಡಪೇಟೆ ಮತ್ತು ಶ್ರೀ ವಸಂತ್ ಪಿಎಸ್ಐ ದೊಡ್ಡಪೇಟೆ ಪೊಲೀಸ್ ಠಾಣೆ ರವರ ನೇತೃತ್ವದ ಸಿಬ್ಬಂಧಿಗಳ ತಂಡವು ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಮಂಡ್ಲಿ ಪಂಪ್ ಹೌಸ್ ನ ಹತ್ತಿರ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾಗ ಅಲ್ಲಿಗೆ ಬಂದ ಸಿಲ್ವರ್ ಬಣ್ಣದ ಇನ್ನೋವಾ ಕಾರನ್ನು ತಡೆದು ಪರಿಶೀಲನೆ ಮಾಡಿದಾಗ ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ಪ್ಲಾಸ್ಟಿಕ್ ಕವರ್ ನಲ್ಲಿ ಗಾಂಜಾವನ್ನು ಸುತ್ತಿ ಇಟ್ಟಿದ್ದು ಮತ್ತು ಕಾರಿನ ಒಳಭಾಗದ ಮಧ್ಯದ ಸೀಟಿನ ಕೆಳಭಾಗದಲ್ಲಿ ಹರಿತವಾದ ಆಯುಧಗಳು ಇರುವುದು ಕಂಡು ಬಂದಿರುತ್ತದೆ. ನಂತರ ಕಾರಿನ ಚಾಲಕನಾದ ಆರೋಪಿ ಅರ್ಬಾಜ್ @ ಹರ್ಬಾಜ್ @ ಹಜರತ್ @ ಅರ್ಬಾಜ್ ಖಾನ್, 23 ವರ್ಷ ಮಾರ್ನಾಮಿ ಬೈಲು ಶಿವಮೊಗ್ಗ ಈತನನ್ನು ದಸ್ತಗಿರಿ ಮಾಡಿ ಆರೋಪಿತನಿಂದ ಅಂದಾಜು ಮೌಲ್ಯ 23,000/- ರೂಗಳ 440 ಗ್ರಾಂ ತೂಕದ ಒಣ ಗಾಂಜಾ ಮತ್ತು 1 ಮಚ್ಚು, 1 ಬರ್ಚಿ ಮತ್ತು 1 ಡ್ರ್ಯಾಗರ್ ಅನ್ನು ಅಮಾನತ್ತು ಪಡಿಸಿಕೊಂಡು ಆರೋಪಿತನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0024/2024 ಕಲಂ 8(ಸಿ), 20(ಬಿ) NDPS ಕಾಯ್ದೆ ಮತ್ತು ಕಲಂ 25(1)(ಎ) ಆಯುಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತದೆ.
إرسال تعليق