ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆ, ಕಾನೂನು ಕೈಗೆತ್ತಿಕೊಂಡರೆ ಯಾರೇ ಆದರೂ ಶಿಕ್ಷೆ ಖಂಡಿತ: ಸಿಎಂ ಸಿದ್ದರಾಮಯ್ಯ

 2024ನೇ ಲೋಕಸಭೆ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್‌ ನ್ನು ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

                                                                 ಸಿಎಂ ಸಿದ್ದರಾಮಯ್ಯ

Posted By : Rekha.M
Source : Online Desk

ಹುಬ್ಬಳ್ಳಿ: 2024ನೇ ಲೋಕಸಭೆ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್‌ ನ್ನು ಫೆಬ್ರವರಿಯಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಸರ್ಕಾರವು ಇಲಾಖೆಗಳು ಮತ್ತು ಗುಂಪುಗಳೊಂದಿಗೆ ಬಜೆಟ್ ಸಮಾಲೋಚನೆಗಳನ್ನು ನಡೆಸಲು ಪ್ರಾರಂಭಿಸಿರುವುದಾಗಿ ಅವರು ನಿನ್ನೆ ಹಾವೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. 

ರಾಜ್ಯದ ಜನತೆಗೆ ಮಧ್ಯಂತರ ಬರ ಪರಿಹಾರವಾಗಿ ಪ್ರತಿ ಹೆಕ್ಟೇರ್‌ಗೆ 2,000 ರೂಪಾಯಿಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ಸರ್ಕಾರ ವರ್ಗಾಯಿಸಲು ಪ್ರಾರಂಭಿಸಿದೆ ಎಂದು ಹೇಳಿದರು. ರಾಜ್ಯವು ಕೇಂದ್ರ ಸರ್ಕಾರದಿಂದ ನೆರವು ಪಡೆದ ನಂತರ, ಎನ್ ಡಿಆರ್ ಎಫ್ ಮಾನದಂಡಗಳ ಪ್ರಕಾರ ಸಂತ್ರಸ್ತ ರೈತರಿಗೆ ಪರಿಹಾರವನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ಯಾವುದೇ ಧರ್ಮದವರಾಗಲಿ ಕಾನೂನು ಕೈಗೆತ್ತಿಕೊಳ್ಳಲು ಬಿಡುವುದಿಲ್ಲ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದರು.



Post a Comment

Previous Post Next Post