ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿ "ನನ್ನನ್ನೂ ಬಂಧಿಸಿ" ಅಭಿಯಾನ ನಡೆಸುತ್ತಿರುವುದನ್ನು ಕಾಂಗ್ರೆಸ್ ಟೀಕಿಸಿದೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಪ್ರತಿಭಟನೆ
ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ನಾಯಕರು ಆಕ್ರೋಶ ವ್ಯಕ್ತಪಡಿಸಿ "ನನ್ನನ್ನೂ ಬಂಧಿಸಿ" ಅಭಿಯಾನ ನಡೆಸುತ್ತಿರುವುದನ್ನು ಕಾಂಗ್ರೆಸ್ ಟೀಕಿಸಿದೆ.
ಚಿಕ್ಕಮಗಳೂರಿನ ಪೊಲೀಸ್ ಠಾಣೆ ಎದುರು ಬಿಜೆಪಿ ನಾಯಕ ಸಿಟಿ ರವಿ ನನ್ನನ್ನೂ ಬಂಧಿಸಿ ಎಂಬ ಪೋಸ್ಟರ್ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸುರೇಶ್ ಕುಮಾರ್ ಸೇರಿದಂತೆ ಅನೇಕ ನಾಯಕರು ನಾನೂ ಕರಸೇವಕ-1992, ನನ್ನನ್ನೂ ಬಂಧಿಸಿ" ಎಂಬ ಅಭಿಯಾನದ ಮೂಲಕ ಕಾಂಗ್ರೆಸ್ ಸರ್ಕಾರದ ನಡೆಯನ್ನು ಪ್ರತಿಭಟಿಸಿದ್ದಾರೆ.
ಬಿಜೆಪಿ ನಾಯಕರ ಪ್ರತಿಭಟನೆಗೆ ವ್ಯಂಗ್ಯವಾಡಿರುವ ಕಾಂಗ್ರೆಸ್ ಪಕ್ಷ, ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಗರೆಲ್ಲ “ನನ್ನನ್ನೂ ಬಂಧಿಸಿ“ ಎಂದು ಒತ್ತಾಯಿಸುತ್ತಿರುವುದು ತಾವು ಮಾಡಿದ ಅಕ್ರಮಗಳ, ಹಗರಣಗಳ ಪ್ರಾಯಶ್ಚಿತ್ತಕ್ಕಾಗಿಯೇ?" ಎಂದು ಪ್ರಶ್ನಿಸಿದೆ.
ಇದೇ ವೇಳೆ ಕಾಂಗ್ರೆಸ್ ಸಿಟಿ ರವಿ, ವಿಜಯೇಂದ್ರ ಫೋಟೋಗಳನ್ನು, ಆ ನಾಯಕರು ತಮ್ಮ ವಿರುದ್ಧದ ಆರೋಪಗಳ ಪೋಸ್ಟರ್ ಹಿಡಿದಿರುವಂತೆ ಎಡಿಟ್ ಮಾಡಿದ್ದು, ಈ ಪೋಸ್ಟರ್ ಹಿಡಿದು ಕುಳಿತರೆ ಸೂಕ್ತ ಎಂಬ ಸಲಹೆ ನೀಡಿದೆ
Post a Comment