ಕರ್ನಾಟಕ ಜಂಟಿ ಅಧಿವೇಶನ ನಡೆದಿದ್ದು, ರಾಜ್ಯಪಾಲರ ಭಾಷಣ ಮೇಲಿನ ವಂದನಾ ನಿರ್ಣಯ ಚರ್ಚೆ ನಡೆಯಿತು. ಈ ವೇಳೆ ಹಲವು ವಿಧೇಯಕಗಳನ್ನು ಮಂಡಿಸಲಾಯಿತು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024 ಕೂಡ ಮಂಡನೆಯಾಗಿದ್ದು, ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ.
ನಿಯಮ ರೂಪಿಸಲು ಒಂದು ಸಮಿತಿ ರಚನೆ ಮಾಡಿ, ಹಲವು ಸುತ್ತಿನ ಚರ್ಚೆಗಳನ್ನು ಮಾಡಿದ್ದೇವೆ. ಒಂದು ಎನ್ಫೋರ್ಸ್ಮೆಂಟ್ ವಿಂಗ್ (ಜಾರಿ ಘಟಕ) ಅನ್ನು ಮಾಡಲಾಗುತ್ತದೆ. ಜಾರಿ ಅಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳು ಇದರಲ್ಲಿರುತ್ತಾರೆ. ಕಾನೂನು ಮತ್ತು ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಲ್ಲ ಎಂಟು ವಲಯ ಆಯುಕ್ತರಿಗೆ ಪೂರ್ಣ ಅಧಿಕಾರ ನೀಡಲಾಗಿದೆ ಎಂದು ಎಂದು ಸಚಿವರು ಹೇಳಿದರು.
ಕನ್ನಡ ಕಣ್ಗಾವಲು ಆ್ಯಪ್
ಕನ್ನಡ ಭಾಷೆಯ ಬಳಕೆ ಕುರಿತು ಯಾವುದೇ ವ್ಯಕ್ತಿ ದೂರು ನೀಡಲು ಕನ್ನಡ ಕಣ್ಗಾವಲು ಎಂಬ ಆ್ಯೊ್ ಅನ್ನು ರೂಪಿಸಲಾಗುತ್ತಿದೆ. ಇಲ್ಲಿಗೆ ಬರುವ ದೂರುಗಳನ್ನು ಸಂಬಂಧಪಟ್ಟ ಸಮಿತಿಗಳಿಗೆ ಕಳುಹಿಸಿ, ಅವರು ಆ ದೂರುಗಳ ಬಗ್ಗೆ ಕ್ರಮವಹಿಸುವಂತೆ ವ್ಯವಸ್ಥೆ ರೂಪಿಸಲಾಗುತ್ತದೆ ಎಂದು ಸಚಿವರು ದನಕ್ಕೆ ವಿವರಿಸಿದರು.ಇದಕ್ಕೂ ಮುನ್ನ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿಯ ಹಿರಿಯ ಸದಸ್ಯರಾದ ಎಸ್.ಸುರೇಶ್ ಕುಮಾರ್, ಆರಗ ಜ್ಞಾನೇಂದ್ರ, ಸಿ.ಸಿ. ಪಾಟೀಲ್, ಕೆ.ಗೋಪಾಲಯ್ಯ ಮತ್ತಿತರರು ಕಾನೂನು ಉಲ್ಲಂಘಿಸುವ ಮತ್ತು ಕನ್ನಡದಲ್ಲಿ ನಾಮಫಲಕ ಹಾಕಲು ನಿರಾಕರಿಸುವ ಎಂಎನ್‌ಸಿ, ಮಾಲ್‌ಗಳು ಮತ್ತು ಇತರ ದೊಡ್ಡ ಸಂಸ್ಥೆಗಳಿಗೆ ಭಾರಿ ದಂಡ ವಿಧಿಸಬೇಕು ಎಂದು ಒತ್ತಾಯಿಸಿದರು. ವ್ಯಾಪಾರ ಸಂಸ್ಥೆಗಳು ನಿಯಮ ಉಲ್ಲಂಘಿಸಿರುವುದು ಕಂಡು ಬಂದಲ್ಲಿ ಸ್ಥಳದಲ್ಲೇ ದಂಡ ವಿಧಿಸುವಂತೆ ಆರ್ ಅಶೋಕ್ ಸೂಚಿಸಿದರು.
ಜನರ ಮತ್ತು ಇಲಾಖೆ ಅಧಿಕಾರಿಗಳು ತಮ್ಮ ಮನಸ್ಥಿತಿಯನ್ನು ಬದಲಾದರೆ ನಾಮಫಲಕಗಳಲ್ಲಿ ಕನ್ನಡದಲ್ಲಿ ತಾನಾಗಿಯೇ ಬರುತ್ತದೆ. ವಾಣಿಜ್ಯ, ಕೈಗಾರಿಕೆ ಮತ್ತು ವ್ಯಾಪಾರ ಸಂಸ್ಥೆಗಳು, ಟ್ರಸ್ಟ್‌ಗಳು, ಸಲಹಾ ಕೇಂದ್ರಗಳು, ಆಸ್ಪತ್ರೆಗಳ ನಾಮಫಲಕಗಳು, ಪ್ರಯೋಗಾಲಯಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು ಇತ್ಯಾದಿಗಳಲ್ಲಿ ಶೇ.60ರಷ್ಟು ಕನ್ನಡ ಇರಬೇಕು ಎಂದು ಶ್ರೀ ಸುರೇಶ್ ಕುಮಾರ್ ಹೇಳಿದರು.
إرسال تعليق