ರಾಜ್ಯಸಭೆ ಚುನಾವಣೆ: ಬಿಜೆಪಿ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಕಣಕ್ಕೆ, ಕಾಂಗ್ರೆಸ್​ಗೆ ಅಡ್ಡಮತದಾನದ ಆತಂಕ

 

Rajya Sabha Elections: ರಾಜ್ಯಸಭೆ ಚುನಾವಣೆಗೆ ಬಿಜೆಪಿ, ಜೆಡಿಎಸ್ ಮೈತ್ರಿ 5ನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿರುವುದು ಕಾಂಗ್ರೆಸ್ ಪಾಳೆಯಕ್ಕೆ ತಲೆಬಿಸಿ ಉಂಟುಮಾಡಿದೆ. ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂದು ಜೆಡಿಎಸ್ ನಾಯಕ ಹೆಚ್​​ಡಿ ಕುಮಾರಸ್ವಾಮಿ ತಿಳಿಸಿದ್ದು, ರಾಜ್ಯಸಭಾ ಚುನಾವಣಾ ಅಖಾಡ ರಂಗೇರಿದೆ.


ಬೆಂಗಳೂರು, ಫೆಬ್ರವರಿ 15: ರಾಜ್ಯಸಭೆ ಚುನಾವಣೆಗೆ (Rajya Sabha Election) ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ (Kupendra Reddy) ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಎಂದು  eÉ.r.J¸ï   ನಾಯಕ  ಹೆಚ್​​ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯ ರಾಷ್ಟ್ರೀಯ, ರಾಜ್ಯ ನಾಯಕರ ಸಲಹೆ ಮೇರೆಗೆ ಎನ್​ಡಿಎ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಬಿಜೆಪಿಯಲ್ಲಿ ಹೆಚ್ಚುವರಿ ಮತಗಳಿವೆ. ವಿಪಕ್ಷದ ಮತಗಳು ನಷ್ಟವಾಗಬಾರದು ಎಂದರು.

ಹೆಚ್ಚುವರಿ ವೋಟ್ ಕುಪೇಂದ್ರಗೆ ವರ್ಗಾವಣೆ ಮಾಡಬೇಕೆಂದು ತೀರ್ಮಾನಿಸಿದ್ದೇವೆ. ಈ ಕಾರಣಕ್ಕೆ ಈ ತೀರ್ಮಾನ ಮಾಡಲಾಗಿದೆ ಎಂದು ಅವರು ಹೇಳಿದರು.

ರಂಗೇರಲಿದೆ ರಾಜ್ಯಸಭಾ ಚುನಾವಣಾ ಅಖಾಡ

ಕಾಂಗ್ರೆಸ್ ಟಕ್ಕರ್ ಕೊಡಲು ಜೆಡಿಎಸ್ ಹಾಗೂ ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದ್ದು, ಕೊನೆಯ ಕ್ಷಣದಲ್ಲಿ ಮಾಜಿ ರಾಜ್ಯಾಸಭಾ ಸದಸ್ಯ ಕುಪೇದ್ರ ರೆಡ್ಡಿ ಅವರನ್ನು ರಾಜ್ಯಸಭಾ ಚುನಾವಣಾ ಅಖಾಡಕ್ಕೆ ಇಳಿಸಲಿದೆ. ಎನ್​ಡಿಎ ಮೈತ್ರಿಯ ಎರಡನೇ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎಂಟ್ರಿಯಿಂದ ಕಾಂಗ್ರೆಸ್ ನಾಯಕರಿಗೆ ಹೊಸ ಆತಂಕ ಶುರುವಾಗಿದೆ.

ಇದೀಗ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಕಾಂಗ್ರೆಸ್ ನಾಯಕರಿಗೆ ಸೃಷ್ಟಿಯಾಗಿದೆ. ಕಾಂಗ್ರೆಸ್​​ನಲ್ಲಿರುವ ಅಸಮಾಧಾನವನ್ನೇ ಬಂಡಾವಳ ಮಾಡಿಕೊಂಡು ಕೈ ಶಾಸಕರಿಂದ ಅಡ್ಡ ಮತದಾನ ಮಾಡಿಸಲು ಬಿಜೆಪಿ, ಜೆಡಿಎಸ್ ಪ್ಲಾನ್ ಮಾಡಿವೆ.

ಹೇಗಿದೆ ಪಕ್ಷಗಳ ಬಲಾಬಲ?

ಈಗಿನ ವಿಧಾನಭೆ ಬಲಾಬಲದ ಪ್ರಕಾರ ಕಾಂಗ್ರೆಸ್ ಮೂರು ಸ್ಥಾನ, ಬಿಜೆಪಿ ಒಂದು ಸ್ಥಾನ ಗೆಲ್ಲಲು ಸುಲಭ ಅವಕಾಶ ಇದೆ. ಆದರೆ, ಮೈತ್ರಿಯ ಎರಡನೇ ಅಭ್ಯರ್ಥಿ ಎಂಟ್ರಿಯಿಂದ ಕಾಂಗ್ರೆಸ್​ಗೆ ಅಡ್ಡ ಮತದಾನದ ಆತಂಕ ಎದುರಾಗಿದೆ. ಕಾಂಗ್ರೆಸ್ ಸಂಖ್ಯಾಬಲ 134. ಇದರಿಂದ ಮೂರು ಅಭ್ಯರ್ಥಿಗಳನ್ನು ಆರಾಮಾಗಿ ಗೆಲ್ಲಿಸಬಹುದಾಗಿದೆ. ಬಿಜೆಪಿ ಸಂಖ್ಯಾಬಲ 66 ಆಗಿದ್ದು, ಇದರಿಂದ ಒಬ್ಬ ಅಭ್ಯರ್ಥಿಯನ್ನು ಗೆಲ್ಲಿಸಬಹುದು. ಆದರೆ, ಬಿಜೆಪಿಯ ಉಳಿದ 20 ಮತಗಳು ಜೆಡಿಎಸ್​ಗೆ ವರ್ಗಾವಣೆ ಆದರೆ ಜೆಡಿಎಸ್ ಅಭ್ಯರ್ಥಿ ಗೆಲ್ಲಲು ಕೇವಲ 5 ಮತಗಳು ಬೇಕಾಗುತ್ತವೆ. ನಾಲ್ಕು ಜನ ಪಕ್ಷೇತರ ಶಾಸಕರ ಬೆಂಬಲ ಪಡೆಯಲು ಬಿಜೆಪಿ, ಜೆಡಿಎಸ್ ಮೈತ್ರಿ ತಂತ್ರಗಾರಿಕೆ ಹೂಡಿವೆ. ಹೀಗಾಗಿ 5 ಶಾಸಕರಿಂದ ಅಡ್ಡ ಮತದಾನ ಮಾಡಿಸಲು ಕಮಲದಳ ನಾಯಕರ ಕಸರತ್ತು ಜೋರಾಗಿದೆ. ಪರಿಣಾಮವಾಗಿ ರಾಜ್ಯಸಭಾ ಅಖಾಡ ರಂಗೇರಿದೆ.

ಈ ಬೆಳವಣಿಗೆ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್, ರಾಜ್ಯಸಭೆಗೆ 5ನೇ ಅಭ್ಯರ್ಥಿ ಹಾಕಿದರೆ ಎಲ್ಲರೂ ವೋಟ್ ಹಾಕಬೇಕು. ಚುನಾವಣೆಗೆ ಮುನ್ನ ನಾಯಕರು ಸೂಚಿಸುವ ರೆಸಾರ್ಟ್​ಗೆ ಬರಬೇಕು. ಸಿಎಂ, ಡಿಸಿಎಂ, ಸಚಿವರು, ಶಾಸಕರು ರೆಸಾರ್ಟ್​ಗೆ ಬಂದು ಇರಬೇಕು ಎಂದು ಬುಧವಾರ ರಾತ್ರಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿತ್ತು.

ಹಳೆಯ ಸೇಡು ತೀರಿಸಿಕೊಳ್ಳಲು ಮುಂದಾದರೇ ಕುಮಾರಸ್ವಾಮಿ?

ರಾಜ್ಯಸಭೆ ಚುನಾವಣೆಗೆ ಕೊನೆಯ ಕ್ಷಣದಲ್ಲಿ ಐದನೇ ಅಭ್ಯರ್ಥಿ ಹಾಕುವ ಮೂಲಕ ಹೆಚ್​ಡಿ ಕುಮಾರಸ್ವಾಮಿ ಹಳೆಯ ಸೇಡು ತೀರಿಸಿಕೊಳ್ಳಲು ಮುಂದಾದರೇ ಎಂಬ ಪ್ರಶ್ನೆ ಉದ್ಭವಿಸಿದೆ. 2013 ರ ರಾಜ್ಯಸಭೆ ಚುನಾವಣೆಯಲ್ಲಿ ಏಳು ಜನ ಜೆಡಿಎಸ್ ಶಾಸಕರು ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿದ್ದರು. ಇದರಿಂದ ಕುಮಾರಸ್ವಾಮಿಗೆ ಬಾರಿ ಮುಖಭಂಗವಾಗಿತ್ತು. ಹೀಗಾಗಿ ಕೊನೆ ಹಂತದಲ್ಲಿ ಕುಪೇಂದ್ರ ರೆಡ್ಡಿ ಅವರನ್ನು ಅಭ್ಯರ್ಥಿ ಮಾಡುವ ಮೂಲಕ ಅಡ್ಡ ಮತದಾನದ ತಂತ್ರವನ್ನು ಕುಮಾರಸ್ವಾಮಿ ಹೆಣೆದಿದ್ದಾರೆ ಎನ್ನಲಾಗಿದೆ. ಈಗಾಲೆ ಜೆಡಿಎಸ್, ಬಿಜೆಪಿ ನಾಯಕರು ಬಿಜೆಪಿ ಶಾಸರನ್ನು ಸಂಪರ್ಕ ಮಾಡುತ್ತಿದ್ದಾರೆ. ಆರು ಶಾಸಕರ ಸಂಪರ್ಕ ಮಾಡಿ ಮಾತುಕತೆ ನಡೆಸಲಾಗಿದೆ. ಶತಾಯಗತಾಯ ಕುಪೇಂದ್ರ ರೆಡ್ಡಿ ಗೆಲ್ಲಿಸಲು ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರಿಗೆ ಟಾಸ್ಕ್ ನೀಡಿದ್ದು, ಹೀಗಾಗಿ ತೆರೆಮರೆ ಕಸರತ್ತು ಜೋರಾಗಿದೆ.


Post a Comment

أحدث أقدم