ದೆಹಲಿ, ಫೆ.15 : zɺÀ° ºÉÊPÉÆÃmïðUÉ (Delhi High Court) ಬಾಂಬ್ ಬೆದರಿಕೆ (bomb threat) ಬಂದಿದೆ. ಇದು ದೆಹಲಿಗೆ ಬಂದ ಎರಡನೇ ಬೆದರಿಕೆಯಾಗಿದೆ. ಇದೀಗ ದೆಹಲಿ ಹೈಕೋರ್ಟ್ನಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ. ರಿಜಿಸ್ಟ್ರಾರ್ ಜನರಲ್‌ಗೆ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬುಧವಾರ ತಡರಾತ್ರಿ ಈ ಮೇಲ್ ಬಂದಿದ್ದು, ಹೈಕೋರ್ಟ್ ಮುಂದೆ ಬಾಂಬ್ ಹಾಕಲಾಗುವುದು ಎಂದು ಇದರಲ್ಲಿ ತಿಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.
ಇನ್ನು ದೆಹಲಿಯಲ್ಲಿ ಒಂದು ಕಡೆ ರೈತರ ಪ್ರಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಭದ್ರತಾ ವ್ಯವಸ್ಥೆಯನ್ನು ಅಲ್ಲಿಯು ಒದಗಿಸಲಾಗಿದೆ.
ಬಾಂಬ್ ಬೆದರಿಕೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದ್ದು, ಹೈಕೋರ್ಟ್ ಆವರಣವನ್ನು ಕೂಲಂಕುಷವಾಗಿ ಶೋಧಿಸಲಾಗುತ್ತಿದೆ. ನ್ಯಾಯಾಲಯಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ದಕ್ಷಿಣ ದೆಹಲಿಯ ಶಾಲೆಯಲ್ಲಿ ಬಾಂಬ್ ಬೆದರಿಕೆ
ದೆಹಲಿಯ ಸಾಕೇತ್‌ನಲ್ಲಿರುವ ಅಮಿಟಿ ಇಂಟರ್‌ನ್ಯಾಶನಲ್ ಸ್ಕೂಲ್‌ಗೆ ಬಾಂಬ್ ಬೆದರಿಕೆ ಬಂದಿದ್ದು, ಶಾಲಾ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಭಯಭೀತರಾಗಿದ್ದರು. ಸೋಮವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿತ್ತು. ಈ ಸಮಯದಲ್ಲಿ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ನೀಡದಿದ್ದರೆ ಫೆ.13ಕ್ಕೆ ಬಾಂಬ್ ಸ್ಫೋಟಿಸುವುದಾಗಿ ತಿಳಿಸಿದ್ದಾರೆ.
Post a Comment