ದೆಹಲಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ, ಮೊದಲು ಪೇಂಟ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಅದು ರಾಸಾಯನಿಕ ಗೋದಾಮು ಪ್ರವೇಶಿಸಿದೆ. ಘಟನೆಯಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆಬ್ರವರಿ 15ರಂದು ದೆಹಲಿಯ ಅಲಿಪೋರ್‌ನಲ್ಲಿರುವ ಪೇಂಟ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಈ ಅಪಘಾತದಲ್ಲಿ ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮೃತರ ದೇಹಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅವರನ್ನು ಗುರುತಿಸುವುದೂ ಕಷ್ಟವಾಗುತ್ತಿದೆ.
ಭಾರೀ ಬೆಂಕಿಯ ಘಟನೆಯಲ್ಲಿ 11 ಜನರು ಸಾವನ್ನಪ್ಪಿದ ಅಲಿಪುರದ ಬಣ್ಣದ ಕಾರ್ಖಾನೆಯು ಜನನಿಬಿಡ ಪ್ರದೇಶದಲ್ಲಿದೆ. ಘಟನೆ ವೇಳೆ ಕಾರ್ಖಾನೆಯೊಳಗೆ ಕೆಲಸ ನಡೆಯುತ್ತಿದ್ದು, ನೌಕರರು ಕೆಲಸದಲ್ಲಿ ನಿರತರಾಗಿದ್ದರು. ಗುರುವಾರ ಸಂಜೆ ಬೆಂಕಿ ಕಾಣಿಸಿಕೊಂಡಿತ್ತು. ನೌಕರರು ತಪ್ಪಿಸಿಕೊಳ್ಳುವ ಅವಕಾಶವೂ ಇರಲಿಲ್ಲ. ಇದೇ ಕಾರಣಕ್ಕೆ ಕಾರ್ಖಾನೆಯಲ್ಲಿದ್ದವರು ಸುಟ್ಟು ಕರಕಲಾದ ಘಟನೆ ನಡೆದಿದೆ.
ಪೈಂಟ್ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ನಂತರ ಕಾರ್ಖಾನೆಗೆ ಬೆಂಕಿ ಹೊತ್ತಿಕೊಂಡಿದೆ. ಸುಮಾರು 7-8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಆಗಮಿಸಿದ್ದವು.
ಬೆಂಕಿ ಎಷ್ಟು ಪ್ರಬಲವಾಗಿತ್ತೆಂದರೆ ಕಾರ್ಖಾನೆಯ ಪಕ್ಕದ ಮನೆಗಳ ಮೇಲೆ ಕೂಡ ಪರಿಣಾಮ ಬೀರಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಂಕಿಗೆ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಮೃತಪಟ್ಟವರನ್ನು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಶವಾಗಾರಕ್ಕೆ ಕಳುಹಿಸಲಾಗಿದೆ.
ಕಾರ್ಖಾನೆಯ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ, ರೈತರ ಪ್ರತಿಭಟನೆಗೆ ಬ್ಯಾರಿಕೇಡ್‌ಗಳನ್ನು ಹಾಕಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿದ್ದು, ಅಗ್ನಿಶಾಮಕ ಟೆಂಡರ್‌ಗಳು ವಿಳಂಬವಾಗಿತ್ತು.
Post a Comment