ನದಿಗೆ ಹಾರಿ ಯುವಕ ಅತ್ಮಹತ್ಯೆ

 


ತುಂಗಾ ಕಾಲೇಜಿನಲ್ಲಿ ಡಿಗ್ರಿ ಓದುತ್ತಿದ್ದ ಯುವಕನೋರ್ವ ವಾರಳಿ ಬಳಿ ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾನೆ.

ತಾಲೂಕಿನ ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ವಾರಳ್ಳಿಯ ಧ್ರುವ (20) ವಾರಳ್ಳಿ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬರಬೇಕಿದೆ.

ಮೃತನು ವಾರಳ್ಳಿಯ ನಿವಾಸಿ ಎಂದು ತಿಳಿದು ಬಂದಿದೆ. ಕುರುವಳ್ಳಿ ಪ್ರಮೋದ್ ಪೂಜಾರಿ ಮೃತ ದೇಹವನ್ನು ನದಿಯಿಂದ ಹೊರ ತರುವಲ್ಲಿ ಯಶಸ್ವಿಯಾಗಿದ್ದು ಆಗುಂಬೆ ಪೊಲೀಸ್ ಠಾಣೆ ಪಿ ಎಸ್ ಐ ರಂಗನಾಥ್ ಅಂತರಗಟ್ಟಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.‌ ಪ್ರಕರಣ ದಾಖಲಾಗಿದೆ. 

Post a Comment

أحدث أقدم