ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಜನವರಿ 01 ರಿಂದ ಮಾರ್ಚ್ 15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಆದರೆ ಜ.2 ರಿಂದ ಮಾರ್ಚ್ 15 ರವರೆಗೆ ತಾತ್ಕಾಲಿಕ ಬಂದ್ ಮಾಡಲಾಗಿದೆ. ಆದರೆ ಪ್ರವೇಶ ದ್ವಾರದಿಂದ ಜೋಗ ವೀಕ್ಷಿಸಲು ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.
ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಪರಿಣಾಮ ಎರಡುವರೆ ತಿಂಗಳ ಕಾಲ ಪ್ರವಾಸಿಗರ ವೀಕ್ಷಣೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು. ಆದರೆ ಇದೀಗ ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ವ್ಯಾಪಕವಾಗಿ ಪ್ರವಾಸಿಗರು ಜೋಗಕ್ಕೆ ಬರುವ ನಿರೀಕ್ಷೆಯಿದೆ.
ಈ ಹಿನ್ನೆಲೆಯಲ್ಲಿ ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ. ಮುಖ್ಯ ರಸ್ತೆಯ ವೀವ್ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬಯಿ ಬಂಗಲೆ, ಮುಂಗಾರು ಮಳೆ ಪಾಯಿಂಟ್ ಸೇರಿದಂತೆ ಇತರೆ ಸ್ಥಳಗಳಿಂದ ಪ್ರವಾಸಿಗರು ಜಲಪಾತದ ಸೊಬಗು ಕಣ್ತುಂಬಿಕೊಳ್ಳಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೋಗ ಜಲಪಾತದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಜಲಪಾತ ವೀಕ್ಷಿಸಲು ತೆರಳುವ ಮುಖ್ಯ ಪ್ರವೇಶ ದ್ವಾರದ ಗೋಪುರ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಆದ್ದರಿಂದ ಜನವರಿ 1ರಿಂದ ಮಾರ್ಚ್ 15 ರವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಈಚೆಗೆ ಆದೇಶ ಹೊರಡಿಸಿದ್ದರು. ಇದೀಗ ಪ್ರವಾಸಿಗರಿಗಾಗಿ ಪ್ರಮುಖ ಸ್ಥಳಗಳಲ್ಲಿ ಜೋಗ ವಿಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
إرسال تعليق