ಎರಡು ಠಾಣಾ ವ್ಯಾಪ್ತಿಯಲ್ಲಿ ಗೋಮಾಂಸ ಮಾರಾಟದ ಅಕ್ರಮ ಕಸಾಯಿ ಖಾನೆಯ ಮೇಲೆ ಪೊಲೀಸರ ದಾಳಿ ನಡೆದಿದೆ. ದಾಳಿಯಲ್ಲಿ ಕಸಾಯಿ ಖಾನೆಯ ಮೂವರನ್ನ ಬಂಧಿಸಲಾಗಿದೆ.
ಇಂದು ಬೆಳಿಗ್ಗೆ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯ ಅನ್ವರ್ ಕಾಲೋನಿಯಲ್ಲಿ ಅಕ್ರಮ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧಾರದ ಮೇರೆಗೆ ದಾಳಿ ನಡೆದಿದೆ.
ಅನ್ವರ್ ಕಾಲೋನಿಯಲ್ಲಿ ಬೆಳ್ಳಂಬೆಳಿಗ್ಗೆ ಎರಡು ಕಸಾಯಿಖಾನೆಯ ಮೇಲೆ ದಾಳಿ ನಡೆಸಲಾಗಿದೆ. ಯಾಸಿನ್ ಎಂಬುವರಿಗೆ ಸೇರಿದ ಕಸಾಯಿ ಖಾನೆಯ ಮೇಲೆ ದಾಳಿ ನಡೆಸಿದ ಪೊಲೀಸರಿಗೆ 75 ಕೆಜಿ ಗೋಮಾಂಸ ಪತ್ತೆಯಾಗಿದೆ. ಮತ್ತು ಮುಜೀದ್ ಎಂಬುವರ ಕಸಾಯಿ ಖಾನೆಯ ಮೇಲೆ ದಾಳಿ ನಡೆಸಿದಾಗ 65 ಕೆಜಿ ಗೋಮಾಂಸ ಪತ್ತೆಯಾಗಿದೆ. ಇಬ್ಬರಿಗೂ ಜೆಸಿಯಾಗಿದೆ.
ಅದರಂತೆ ಶಿವಮೊಗ್ಗದ ಸೂಳೆಬೈಲಿನಲ್ಲಿರುವ ಕಸಾಯಿಖಾನೆಯ ಮೇಲೆ ತುಂಗ ನಗರ ಪೊಲೀಸ್ ಠಾಣೆಯ ಪಿಐ ಗುರುರಾಜ್ ನೇತೃತ್ವದಲ್ಲಿ ದಾಳಿ ನಡೆದಿದೆ. ದಾಳಿಯ ವೇಳೆ 60 ಕೆಜಿ ಗೋಮಾಂಸ ಪತ್ತೆಯಾಗಿದೆ. ಆಸಿಫ್ ಮುಬಾರಕ್ ಎಂಬಾತನನ್ನ ಬಂಧಿಸಲಾಗಿದೆ.
إرسال تعليق