ಮೈಸೂರು ನಾಲ್ವಡಿ ಕೃಷ್ಣ ರಾಜಒಡೆಯರ್ ಅವರು ಮುನ್ನುಡಿಯೊಂದಿಗೆ ಆರಂಭವಾಗಿ ಖ್ಯಾತ ಪತ್ತಕರ್ತರು,ಕನ್ನಡ ಸಾರಸ್ವತ ಲೋಕದ ಜ್ಞಾನ ಶ್ರೇಷ್ಠರೂ ಆದ ಡಿ ವಿ ಗುಂಡಪ್ಪ ( ಡಿವಿಜಿ) ಅವರ ಸಾರಥ್ಯದಲ್ಲಿ ಪುನರ್ ನಾಮಕರಣಗೊಂಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವು ಶತಮಾನೋತ್ಸದತ್ತ ಮುನ್ನಡೆಯುತ್ತಿದ್ದು, ರಾಜ್ಯದ ಎಂಟು ಸಾವಿರಕ್ಕೂ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವ ಉಳ್ಳ ದೇಶದ ಏಕೈಕ ಸಂಘಟನೆಯಾಗಿದೆ.
ರಾಜ್ಯದ ಸುದ್ದಿಮಾಧ್ಯಮ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯನಿರತ ಪತ್ರಕರ್ತರ ಯೋಗಕ್ಷೇಮ ಮತ್ತು ವೃತ್ತಿಪರ ಅಭ್ಯುದ್ಯಯದ ಆಶಯಗಳೊಂದಿಗೆ ಹೆಜ್ಜೆ ಹಾಕುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡ್ಬಲ್ಯೂಜೆ) ತನ್ನ ಸಂಘಟನಾತ್ಮಕ ಚಟುವಟಿಕೆಗಳ ಭಾಗವಾಗಿರುವ ಈ ಬಾರಿಯ 39ನೇ ರಾಜ್ಯಸಮ್ಮೇಳನವನ್ನು ಕಲ್ಪತರುನಾಡು, ಸಿದ್ದಶರಣ ದಾಸೋಹದ ನೆಲವಾಗಿರುವ ತುಮಕೂರಿನಲ್ಲಿ ಜನವರಿ 18 ಮತ್ತು 19ರಂದು ನಡೆಯಲಿದೆ.
ಸಮ್ಮೇಳನದ ಆಶಯ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತಿ ಹೆಚ್ಚಿನ ಕಾರ್ಯನಿರತ ಪತ್ರಕರ್ತರ ಸದಸ್ಯತ್ವವನ್ನೊಳಗೊಂಡ ಕಾರ್ಮಿಕ ಕಾಯ್ದೆಯಡಿ ನೋಂದಾಯಿಸಿಲ್ಪಟ್ಟ ದೇಶದ ಏಕೈಕ ಪತ್ರಕರ್ತರ ಸಂಘಟನೆಯಾಗಿದೆ.
ಸುದ್ದಿ ಮನೆಗಳಲ್ಲಿ ವಿವಿಧ ಸ್ತರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವರದಿಗಾರರು/ಪತ್ರಕರ್ತರು, ಹೋಬಳಿ ಮಟ್ಟದಿಂದ ರಾಜ್ಯಮಟ್ಟದ ವರೆಗೂ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ವೃತ್ತಿ ಭದ್ರತೆ, ಮೂಲಭೂತ ಸೌಕರ್ಯಗಳ ಸಂರಕ್ಷಣೆಯ ನಿಟ್ಟಿನಲ್ಲಿ ಸಂಘವು ಸಂಘಟನಾತ್ಮಕ ಚಟುವಟಿಕೆಗಳನ್ನು ಸಕ್ರೀಯವಾಗಿ ನಡೆಸಿಕೊಂಡು ಬರುತ್ತಿದೆ.
ಪತ್ರಿಕೋದ್ಯಮದಲ್ಲಿ ಆಗುತ್ತಿರುವ ವೃತ್ತಿಪರತೆ, ಜಾಗತಿಕ-ಆಧುನಿಕ ತಾಂತ್ರಿಕ ಬದಲಾವಣೆಗಳಿಗೆ ತಕ್ಕಂತೆ ಪತ್ರಕರ್ತರು ಒಗ್ಗಿಕೊಳ್ಳುವುದು ದೊಡ್ಡ ಸವಾಲೇ ಸರಿ, ಇಂತಹ ಸಂದರ್ಭದಲ್ಲಿ ಪತ್ರಕರ್ತರ ಬೌದ್ಧಿಕ ವಿಕಸನ ಮತ್ತು ಬೌದ್ಧಿಕ ಉನ್ನತೀಕರಣಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವುದು, ತರಭೇತಿ ನೀಡಲಾಗುತ್ತಿದೆ.
ಪತ್ರಕರ್ತರು ಎದುರಿಸುತ್ತಿರುವ ವೃತ್ತಿ ಪರ ಸಮಸ್ಯೆಗಳು , ಆರೋಗ್ಯ, ಪ್ರೋತ್ಸಾಹಕ ಯೋಜನೆಗಳ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲು ಸಮ್ಮೇಳನಗಳು ಸಮರ್ಥ ವೇದಿಕೆಯಾಗುತ್ತವೆ.
ಈ ಎಲ್ಲಾ ಸಂಘಟನಾತ್ಮಕ ಚಟುವಟಿಕೆಗಳನ್ನು ವಾರ್ಷಿಕ ಸಮ್ಮೇಳನಗಳಲ್ಲಿ ಮಂಥನ ಮಾಡುವ ಅವಕಾಶವನ್ನು ಸೃಷ್ಟಿಕೊಳ್ಳಲಾಗಿದೆ. ಪತ್ರಿಕೋದ್ಯಮ, ಪತ್ರಕರ್ತರು ಸೇರಿದಂತೆ ನ್ಯೂಸ್ ರೂಂ ನ ಎಲ್ಲಾ ಆಯಾಮಗಳ ಕುರಿತು ಚಿಂತನ-ಮಂಥನ ಮಾಡುವುದು , ಈ ಮೂಲಕ ಪತ್ರಿಕೋದ್ಯಮದ ಸಮಗ್ರ ಹಿನ್ನೋಟ, ಮುನ್ನೋಟಗಳನ್ನು ಕಾಣುವುದು ಸಮ್ಮೇಳನದ ಮುಖ್ಯ ಉದ್ದೇಶಗಳಲ್ಲಿ ಒಂದಾಗಿದೆ.
ಕೋವಿಡ್ ಕಷ್ಟದ ಕಾಲದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಪತ್ರಕರ್ತರ ನೆರವಿಗೆ ಧಾವಿಸುವ ಮೂಲಕ ಅಭದ್ರತೆಯ ಆತಂಕದಲ್ಲಿದ್ದ ಪತ್ರಕರ್ತರಿಗೆ ಆಸರೆಯಾಗಿದ್ದು ಸಂಘಟನಾ ಶಕ್ತಿಯ ಸಾರ್ಥಕತೆ ಎನ್ನಬಹುದು.
ಉದ್ಘಾಟನೆ:
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 39ನೇ ರಾಜ್ಯ ಸಮ್ಮೇಳನವು ತುಮಕೂರಿನಲ್ಲಿ ಜ.18 ಮತ್ತು 19 ರಂದು ನಡೆಯಲಿದೆ.
ಜ. 18 ರಂದು ಬೆಳಗ್ಗೆ 8.30ಕ್ಕೆ ತುಮಕೂರಿನ ಟೌನ್ ಹಾಲ್ ಬಿಜಿಎಸ್ ವೃತ್ತದಿಂದ ಪತ್ರಕರ್ತರ ಸಾಂಸ್ಕೃತಿಕ ಮೆರಗಿನ ಮೆರವಣಿಗೆಯನ್ನು ಗೃಹ ಸಚಿವರೂ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಜಿ ಪರಮೇಶ್ವರ್ ಅವರು ಉದ್ಘಾಟಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಈ ಸಮಾರಂಭಗಳಲ್ಲಿ ಹಿರೇ ಮಠಾಧೀಕ್ಷರಾದ ಡಾ. ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ಡಾ. ಶ್ರೀವಿರೇಶಾನಂದ ಸರಸ್ವತಿ ಸ್ವಾಮೀಜಿ, ಸ್ವಾಮಿ ಜಪಾನಂದಜೀ ಸಾನಿಧ್ಯ ವಹಿಸಲಿದ್ದಾರೆ.
ಇದೇ ದಿನ ಬೆಳಗ್ಗೆ 11 ಗಂಟೆಗೆ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಿರ‍್ಮಿಸಲಾಗಿರುವ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ವೇದಿಕೆಯಲ್ಲಿ ಸಿದ್ದಗಂಗಾ ಮಠದ ಸಿದ್ದಲಿಂಗಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ತುಮಕೂರು ಜಿಲ್ಲೆಯ ಹಾಲಿ ಶಾಸಕರು, ಮಾಜಿ ಶಾಸಕರು,ಸಂಸದರುಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮ್ಮೇಳನ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಟಿ ವಿ ಶಿವಾನಂದ ತಗಡೂರು ಅವರು ವಹಿಸಲಿದ್ದು. ಕೇಂದ್ರ ಸಚಿವ ವಿ.ಸೋಮಣ್ಣ ಸಚಿವ ಕೆ.ಎನ್ ರಾಜಣ್ಣ ಹಾಗೂ ಜಿಲ್ಲೆಯ ಎಲ್ಲಾ ಶಾಸಕರುಗಳು ಆತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂವಾದ ಗೋಷ್ಟಿಗಳು:
ಎರಡು ದಿನಗಳ ಸಮ್ಮೇಳನದಲ್ಲಿ ಪತ್ರಿಕೋದ್ಯಮಕ್ಕೆ ಸಂಬಂಧಿಸಿದಂತೆ ಮಹತ್ವದ ಸಂವಾದ ಮತ್ತು ಗೋಷ್ಟಿಗಳು ನಡೆಯಲಿವೆ.
ಜ. 18 ರಂದು ಮಧ್ಯಾಹ್ನ 2 ಗಂಟೆಗೆ ಸಂವಿಧಾನ ಮತ್ತು ಮಾಧ್ಯಮ ವಿಷಯವಾಗಿ ನಡೆಯುವ ಗೋಷ್ಟಿಯನ್ನು ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ಅವರು ಉದ್ಘಾಟಿಸಲಿದ್ದು, ಖ್ಯಾತ ಪತ್ರಕರ್ತ, ಮಾಧ್ಯಮ ತಜ್ಞ ಜಿ.ಎನ್ ಮೋಹನ್ ಅವರು ವಿಷಯ ಮಂಡಿಸಲಿದ್ದು, ಮುಖ್ಯಮಂತ್ರಿಗಳು ರಾಜಕೀಯ ಸಲಹೆಗಾರರಾದ ಬಿ.ಆರ್ ಪಾಟೀಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ, ಶಾಸಕರೂ ಆದ ಎ ಎಸ್ ಪೊನ್ನಣ್ಣ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಜೆ 4.30ಕ್ಕೆ ಸುದ್ದಿಮನೆ ಮತ್ತು ಪೋಟೋಗ್ರಾಫಿ ಗೋಷ್ಟಿಯಲ್ಲಿ ಹಿರಿಯ ಪತ್ರಕರ್ತ ಕೆ. ಶಿವಸುಬ್ರಹ್ಮಣ್ಯ ಅವರು ಉದ್ಘಾಟಿಸಲಿದ್ದು, ಹಿರಿಯ ಪತ್ರಿಕಾಛಾಯಾಗ್ರಾಹಕ ಕೆ.ಗೋಪಿನಾಥ್ ಅನುಶಾಂತರಾಜ್ ಶರಣು ಬಸಪ್ಪ ಪಾಲ್ಗೊಳ್ಳಲಿದ್ದಾರೆ.
ಜ. 19 ರಂದು ಬೆಳಗ್ಗೆ 10.30ಕ್ಕೆ ಮಾಧ್ಯಮ ಮತ್ತು ಓದುಗರು /ನೋಡುಗರು/ಕೇಳುಗರು ಗೋಷ್ಟಿಯನ್ನು ವಿಜಯವಾಣಿ ಸಂಪಾದಕರಾದ ಕೆ.ಎನ್ ಚನ್ನೆಗೌಡ ಉದ್ಘಾಟಿಸಿದರೆ, ಪ್ರಜಾವಾಣಿ ಸಂಪಾದಕರಾದ ರವೀಂದ್ರ ಭಟ್ ಐನಕೈ ಅವರು ಅಧ್ಯಕ್ಷತಗೆ ವಹಿಸಲಿದದಾರೆ. ಹಿರಿಯ ಪತ್ರಕರ್ತರಾದ ಅನಂತಚಿನಿವಾರ, ಮೈಸೂರುವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾದ ಎಂ ಎಸ್ ಸ್ವಪ್ನ, ಅವರುಗಳು ಭಾಗವಹಿಸಲಿದ್ದಾರೆ.
ಮಧ್ಯಾಹ್ನ 12 ಕ್ಕೆ ಸಾಮಾಜಿಕ ಜಾಲತಾಣ ಮತ್ತು ಪತ್ರಕರ್ತರ ಸವಾಲುಗಳು ಗೋಷ್ಟಿಯನ್ನು ಸುವರ್ಣ ನ್ಯೂಸ್ ಸಂಪಾದಕರ ಅಜಿತ್ ಹನುಮಕ್ಕನವರ್ ಉದ್ಘಾಟಿಸಲಿದ್ದು, ವಿಜಯಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಪತ್ರಕರ್ತ ಗೌರೀಶ್ ಅಕ್ಕಿ , ಕಸ್ತೂರಿ ಸಂಪಾದಕರಾದ ಶಾಂತಲಾ ಧರ್ಮರಾಜ್, ದಾವಣಗೆರೆವಿವಿ ಡಾ. ಶಿವಕುಮಾರ ಕಣಸೋಗಿ ಪಾಲ್ಗೋಳ್ಳಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಸ್ಥಳೀಯ ಪತ್ರಿಕೆಗಳು /ಜಾಹೀರಾತು/ವಿತರಕರು ಗೋಷ್ಟಿಯನ್ನು ವಾರ್ತಾ ಇಲಾಖೆ ಆಯುಕ್ತ ಹೇಮಂತ ನಿಂಬಾಳ್ಕರ್ ಉದ್ಘಾಟಿಸಲಿದ್ದು ಹಿರಿಯ ಪತ್ರಿಕಾ ಸಂಪಾದಕರಾದ ಎಸ್ ನಾಗಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಎರಡು ದಿನಗಳ ಗೋಷ್ಟಿಗಳಲ್ಲಿ ಸಂವಾದಕರಾಗಿ ಹಿರಿಯ ಪತ್ರಕರ್ತರಾದ ಗಂಗಾಧರ ಮೊದಲಿಯಾರ್, ಶಿವಕುಮಾರ್ ಬೆಳ್ಳಿತಟ್ಟೆ, ಉಗಮ ಶ್ರೀನಿವಾಸ್, ಕುಚ್ಚಂಗಿ ಪ್ರಸನ್ನ, ಮರಿಯಪ್ಪ, ಉಮೇಶ್ ಭಟ್ , ಹರೀಶ್ ರೈ, ಗುರುನಾಥ್, ಬಿ.ಎಂ ಹನೀಫ್, ಟಿ ಎಂ ಸತೀಶ್ ಮೊದಲಾದವರು ಭಾಗವಹಿಸಲಿದ್ದಾರೆ.
ಸಮ್ಮೇಳನದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿನಿಧಿಗಳ ಸಭೆ ಮತ್ತು ಕಲ್ಪತರು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಶಾಖೆಯು ಸಮ್ಮೇಳನದ ಆತಿಥ್ಯ ವಹಿಸಿದ್ದು ಜಿಲ್ಲಾ ಘಟಕದ ಅಧ್ಯಕ್ಷರಾದ ಚಿ ನಿ ಪುರುಷೋತ್ತಮ , ಪ್ರಧಾನಕಾರ್ಯದರ್ಶಿ ರಘುರಾಮ್ ತಂಡ ಅವಿರತವಾಗಿ ಶ್ರಮಿಸುತ್ತಿದೆ. ಸಮ್ಮೇಳನವು ಸಾಂಸ್ಕೃತಿಕ ಸಮಾರಂಭಗಳನ್ನು ಒಳಗೊಂಡಿದ್ದು ಖ್ಯಾತ ಗಾಯಕಿ ಶಮಿತ ಮಲ್ನಾಡ್ ಅವರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.
إرسال تعليق