ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ, ಹಾಗೂ ಜಿಲ್ಲಾ ಭೋವಿ ವಿದ್ಯಾವಧಕ ಸಂಘ ಇವರ ವತಿಯಿಂದ ಶ್ರೀ ಶಿವಯೋಗಿ ಸಿದ್ದೇಶ್ವರ ಜಯಂತಿಯನ್ನು ಜನವರಿ 14ರಂದು ಬೆಳಗ್ಗೆ 11 ಗಂಟೆಗೆ ಕುವೆಂಪು ರಂಗ ಮಂದಿರದಲ್ಲಿ ನಡೆಸಲಾಗುತ್ತಿದೆ. ಈ ಕುರಿತು ಭೋವಿ ಸಮಾಜದ ಅಧ್ಯಕ್ಷರಾದ ರವಿಕುಮಾರ್ ತಿಳಿಸಿದರು.
ಇಂದು ಶಿವಮೊಗ್ಗದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಬಂಗಾರಪ್ಪನವರು ನಡೆಸಲಿದ್ದಾರೆ. ಹಾಗೆಯೇ ಶ್ರೀ ತಂಗಡಗಿ ಶಿವರಾಜ್ ಸಂಗಪ್ಪ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲ್ಯಾಣ ಸಚಿವರನ್ನು ವಿಶೇಷವಾಗಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ವಹಿಸಲಿದ್ದಾರೆ. ಎಂದರು.
ಮುಖ್ಯ ಅತಿಥಿಗಳಾಗಿ ಭದ್ರಾವತಿ ಕ್ಷೇತ್ರದ ಶಾಸಕರು ಶ್ರೀ ಬಿಕೆ ಸಂಗಮೇಶ್ವರ ಸಾಗರ ಕ್ಷೇತ್ರದ ಶಾಸಕರಾದ ಶ್ರೀ ಬಿ ಕೆ ಗೋಪಾಲ ಕೃಷ್ಣ ಬೇಳೂರು ಸಂಸದರಾದ ಬಿ ವೈ ರಾಘವೇಂದ್ರ ತೀರ್ಥಳ್ಳಿ ಶಾಸಕರಾದ ನಾಟಕ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
إرسال تعليق