ರಾಜ್ಯದಲ್ಲಿ HMPV ಸೋಂಕು ಹರಡುತ್ತಿರುವ ಬಗ್ಗೆ ಆರೋಗ್ಯ ಇಲಾಖೆ ತುರ್ತು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ.
ಹೀಗಿರುವಾಗ ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳು ಜಿಲ್ಲಾಡಳಿತ ಅಥವಾ ಜಿಲ್ಲಾ ಆರೋಗ್ಯ ಇಲಾಖೆಯ ಯಾವುದೇ ಅಧಿಕಾರಿಗಳನ್ನು ಸಂಪರ್ಕಿಸದೆ ಜಿಲ್ಲೆಯಲ್ಲಿ ಸೋಂಕು ಹರಡುತ್ತಿರುವ ಬಗ್ಗೆ ಜನರಲ್ಲಿ ಆತಂಕವನ್ನುoಟು ಮಾಡುವ ರೀತಿಯಲ್ಲಿ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಿಸಿರುವ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರತಿನಿಧಿಗಳು ಜಿಲ್ಲೆಯಲ್ಲಿನ HMPV ಸೊಂಕಿನ ಕುರಿತು ಸುದ್ದಿ ಪ್ರಕಟಿಸುವ ಮುನ್ನ ಸಂಬಂದಿತ ಇಲಾಖಾ ಅಧಿಕಾರಿಗಳನ್ನು ಸಂಪರ್ಕಿಸಿ, ಮಾಹಿತಿ ಪಡೆದು ವಾಸ್ತವ ವರದಿಯನ್ನು ಪ್ರಕಟಿಸಲು ಕೊರಿದ್ದಾರೆ.
Post a Comment