ಸಂಕ್ರಾಂತಿ ಹಬ್ಬದಂದು ಹುಲಿ-ಸಿಂಹಧಾಮದಲ್ಲಿ ವೀಕ್ಷಣೆಗೆ ಅವಕಾಶ

 

ಮಂಗಳವಾರ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಸಾಮಾನ್ಯವಾಗಿ ಮಂಗಳವಾರದಂದು ವಾರದ ರಜೆಯಾಗಿರುತ್ತದೆ. ರಜೆ ದಿನದಂದು ಪ್ರವಾಸಿಗರ ವೀಕ್ಷಣೆಗೆ ಸಾಮಾನ್ಯವಾಗಿ ಅವಕಾಶವಿರುವುದಿಲ್ಲ.


ಆದರೆ, ಸಂಕ್ರಾಂತಿ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಮೃಗಾಲಯ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:14.01.2025ರ ಮಂಗಳವಾರವೂ ಸಹ ತೆರೆದಿರುತ್ತದೆ. 


ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿರುತ್ತದೆ. ಸದರಿ ಮಾಹಿತಿಯನ್ನು ಪತ್ರಿಕೆಯಲ್ಲಿ ಪ್ರಕಟಿಸಲು ಕೋರಿದೆ.

Post a Comment

Previous Post Next Post