ರಾಜ್ಯ ಬಿಜೆಪಿಯಲ್ಲಿ ಮೂಡಿರುವ ಗೊಂದಲದ ವಿಚಾರದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಗೃಹ ಮಂತ್ರಿ ಆರಗ ಜ್ಞಾನೇಂದ್ರ ಯಾರು ಕೂಡ ಪಕ್ಷಕ್ಕಿಂತ ದೊಡ್ಡವರಲ್ಲ ಎಂದು ಕಿವಿ ಮಾತು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಲೀಡರ್ ಬೇಸ್ಡ್ ಪಾರ್ಟಿಯಲ್ಲ ಬದಲಿಗೆ ಕಾರ್ಯಕರ್ತರ ಬೇಸ್ಡ್ ಪಾರ್ಟಿ. ಇತ್ತೀಚಿನ ಬೆಳವಣಿಗೆಯಿಂದಾಗಿ ಕಾರ್ಯಕರ್ತರು ತುಂಬಾ ನೊಂದಿದ್ದಾರೆ. ಪಕ್ಷದ ಇಂದಿನ ಬೆಳವಣಿಗೆ ಬಹಳಷ್ಟು ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ ಎಂದರು.
ಪ್ರತಿ ದಿನವೂ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ. ಪಕ್ಷದ ಪ್ರತಿಯೊಬ್ಬರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅಧ್ಯಕ್ಷರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಯಾವುದೇ ಅಸಮಾಧಾನ ಇದ್ದರೂ ಕುಳಿತು ಕೊಂಡು ಮಾತನಾಡಬಹುದು ಎಂದರು.
ವಂಡರ್ ಫುಲ್ ಬಜೆಟ್
ಇಡೀ ದೇಶ ಹೆಮ್ಮೆ ಪಡುವಂತಹ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮ ನೀಡಿದ್ದಾರೆ. 10 ಲಕ್ಷ ರೂಪಾಯಿ ವರೆಗಿನ ಆದಾಯಕ್ಕೆ ತೆರಿಗೆ ಮಿತಿ ಸಿಗಲಿದೆ ಎಂದುಕೊಂಡಿದ್ದೆವು. ಆದರೆ ಅದನ್ನು 12 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಅನುಕೂಲವಾಗುವಂತಹ ಕ್ರಮವನ್ನು ಕೈಗೊಂಡಿದ್ದಾರೆ. ಕ್ಯಾನ್ಸರ್ ಔಷಧ ಮೇಲಿನ ಕಸ್ಟಮ್ ಡ್ಯೂಟಿಯನ್ನು ತೆಗೆದು ಹಾಕಿ ಆಗಿದೆ ಎಂದರು.
ಎಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್ ಪಡಿತರಾಗಿ ಡೇ ಕೇರ್ ಆರಂಭಿಸಲಾಗಿದೆ. ಕಿಸಾನ್ ಕಿಸಾನ್ ಕ್ರೆಡಿಟ್ ಮಿತಿಯನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದಾರೆ. ರೈತರ ಆದಾಯ ದ್ವಿಗುಣವಾಗಬೇಕು ಎಂಬ ಆಶಯಕ್ಕೆ ಇದು ಪೂರಕವಾಗಿದೆ. ಶಾಲೆಗಳಿಗೆ ಇಂಟರ್ನೆಟ್ ಸೌಲಭ್ಯ ನೀಡುವುದು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುಕೂಲ ಆಗಲಿದೆ ಎಂದರು.
ಬೀದಿಬದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತ ಕ್ರಮವನ್ನು ಸರ್ಕಾರ ಘೋಷಿಸಿದೆ. ಎಲೆಕ್ಟ್ರಾನಿಕ್ ವಸ್ತುಗಳ ಮೇಲಿನ ಬೆಲೆ ಇಳಿಸಲಾಗಿದೆ. ಎಲೆಕ್ಟ್ರಿಕ್ ಕಾರುಗಳ ಬಳಕೆಗೆ ಉತ್ತೇಜನ ನೀಡಲಾಗಿದೆ. ಇದರಿಂದಾಗಿ ಪೆಟ್ರೋಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲಿದೆ.ರಾಜ್ಯ ಸರ್ಕಾರ ಸರಿಯಾಗಿ ಕೇಂದ್ರದ ಮುಂದೆ ಬೇಡಿಕೆ ಇಟ್ಟಿಲ್ಲ. ಹಾಗಾಗಿ ಕಾಂಗ್ರೆಸ್ ನವರು ಸುಖಾ ಸುಮ್ಮನೆ ಟೀಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕೇಂದ್ರ ಸರ್ಕಾರದ ಹಲವು ಯೋಜನೆ ಜಾರಿಯಲ್ಲಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೂ ಅಗತ್ಯವಾದ ನೆರವನ್ನು ನೀಡುತ್ತಿದೆ ಎಂದರು.
Post a Comment