ಉದ್ಯೋಗ ಮೇಳದಲ್ಲಿ ಯುವನಿಧಿ ಅಭಿಯಾನ

 

ಕರ್ನಾಟಕ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಗೆ 2022-23 ರಲ್ಲಿ ಹಾಗೂ ನಂತರದ ಸಾಲಿನಲ್ಲಿ ಸ್ನಾತಕ ಪದವಿ/ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ತೇರ್ಗಡೆಯಾಗಿ(pass) ಉದ್ಯೋಗ ಸಿಗದೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯದೆ ಇರುವವರಿಗೆ ಫೆ. 24 ರಂದು ನಗರದ ಎ.ಟಿ.ಎನ್.ಸಿ. ಕಾಲೇಜು, ಮಹಾವೀರ ವೃತ್ತ ಇಲ್ಲಿ ಉದ್ಯೋಗ ಮೇಳ(job fair) ಆಯೋಜಿಸಲಾಗಿದ್ದು, ಈ ಮೇಳದಲ್ಲಿ ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. 


ಆಸಕ್ತರು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.


ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದೂ.ಸಂ.: 08182-255293/ 9680663606 ಗಳನ್ನು ಸಂಪರ್ಕಿಸುವುದು. 

Post a Comment

Previous Post Next Post