19 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಇಂದಿನಿಂದ ಆರಂಭಗೊಂಡಿದೆ. ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ ಏರ್ಪಡಿಸಿರುವ ಸಮ್ಮೇಳನವನ್ನು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಉದ್ಘಾಟಿಸಿದರು.
ಇನ್ನು ತೀರ್ಥಹಳ್ಳಿ ತಾಲ್ಲೂಕಿನ ಹಿರಿಯ ಸಾಹಿತಿ ಡಾ. ಜಿ.ಕೆ.ರಮೇಶ್ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಕೊಂಡಿದ್ದಾರೆ. ಸುಮಾರು 4 ಸಾವಿರ ಪ್ರತಿನಿಧಿಗಳು ಸಾಹಿತ್ಯ ಸಮ್ಮೇಳನಕ್ಕಾಗಿ ನೋಂದಣಿ ಮಾಡಿಕೊಂಡಿದ್ದು, ಎರಡು ದಿನಗಳಲ್ಲಿ 10 ಕ್ಕೂ ಹೆಚ್ಚು ಗೋಷ್ಟಿಗಳು ನಡೆಯಲಿವೆ. ಈ ಸಮ್ಮೇಳನದಲ್ಲಿ ನಾಡಿನ ಪ್ರಸಿದ್ಧ ಸಾಹಿತಿಗಳು, ಚಲನಚಿತ್ರ ನಟರು ಭಾಗವಹಿಸಲಿದ್ದಾರೆ.
ಈ ಬಾರಿ ಪುಸ್ತಕ ಮಾರಟ ಮಳಿಗೆಗಳ ಜೊತೆಯಲ್ಲಿ ವಿಭಿನ್ನ ಬಗೆಯ 25 ಕ್ಕೂ ಹೆಚ್ಚು ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಶಿಕ್ಷಕಿ ಮೇರಿ ಡಿಸೋಜ ಸಂಗ್ರಹಿಸಿರುವ ಅಮೂಲ್ಯ ನಾಣ್ಯಗಳು ಹಾಗೂ ಶಿವಮೊಗ್ಗ ನಾಗರಾಜ ಅವರು ಸೆರೆ ಹಿಡಿದಿರುವ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಇಂದು ಬೆಳಗ್ಗೆ 9.30 ಕ್ಕೆ ಸಾಹಿತ್ಯ ಗ್ರಾಮದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಡಿಡಿಪಿಐ ಮಂಜುನಾಥ ಎಸ್.ಆರ್ ರಾಷ್ಟ್ರಧ್ವಜವನ್ನು, ವಾರ್ತಾಧಿಕಾರಿ ಆರ್.ಮಾರುತಿ ನಾಡಧ್ವಜವನ್ನು ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಮಂಜುನಾಥ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ಬೆಳಗ್ಗೆ 10 ಗಂಟೆಗೆ ಗೋಪಾಳದ ಆನೆ ಸರ್ಕಲ್‍ನಿಂದ ಹೊರಟ ಸಾಂಸ್ಕೃತಿಕ ನಡಿಗೆಗೆ ಸಮ್ಮೇಳನಾಧ್ಯಕ್ಷರೊಂದಿಗೆ ರಾಜ್ಯ ಭೋವಿ ಅಭಿವೃದ್ಧಿ ನಿಗಮ ಅಧ್ಯಕ್ಷ ಎಸ್.ರವಿಕುಮಾರ್ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಸಮ್ಮೇಳನದ ಸ್ಮರಣ ಸಂಚಿಕೆ ಕ್ರಿಯಾಶೀಲತೆ ಒಳನೋಟ ಪುಸ್ತಕವನ್ನು ಲೋಕಾರ್ಪಣೆಗೊಳಿಸಿದರು.
إرسال تعليق