ಕಾರು ಹಾಗೂ‌ ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

 

ಕಾರು(car) ಹಾಗೂ‌ ಬೈಕ್(bike) ನಡುವೆ ಮುಖಾಮುಖಿ ಡಿಕ್ಕಿಯಾಗಿ(accident) ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಕೈಮರ ಚೆಕ್ ಪೋಸ್ಟ್ ನಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ತಡಸ ಗ್ರಾಮದ 62 ವರ್ಷದ ನಾಗರಾಜಪ್ಪ ಸ್ಥಳದಲ್ಲೆ ಮೃತಪಟ್ಟಿದ್ದಾರೆ. 


ತಡಸ ನಿವಾಸಿ ನಾಗರಾಜಪ್ಪ ಕೈಮರದ ಬಳಿಯ ಮರಾಠ ಮಿಲ್ಟ್ರಿ ಹೋಟೆಲ್‌ನಲ್ಲಿ ಊಟ ಮುಗಿಸಿಕೊಂಡು ಶಿವಮೊಗ್ಗ - ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡಸದ ಕಡೆ ವಾಹನ ತಿರುಗಿಸುವಾಗ ಶಿವಮೊಗ್ಗ ಕಡೆಯಿಂದ ವೇಗವಾಗಿ ಬರುತ್ತಿದ ಕಾರು ಬೈಕಿಗೆ ಗುದ್ದಿದೆ. ಕಾರು ಗುದ್ದಿದ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಕಾಲು ಹಾಗೂ ತಲೆಯ ಭಾಗದಲ್ಲಿ ಗಂಭೀರವಾಗಿ ಗಾಯಗೊಂಡಿದ ನಾಗರಾಜಪ್ಪ ಸ್ಥಳದಲ್ಲೆ ಮೃತಪಟ್ಟಿದ್ದಾರೆ. 


ಕಾರು ಚಾಲಕ ನಡು ರಸ್ತೆಯಲ್ಲೆ ವಾಹನ ನಿಲ್ಲಿಸಿ ಪರಾರಿಯಾಗಿದ್ದಾನೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post a Comment

أحدث أقدم