ಖಾಲಿ ಇರುವ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ- ಆಕ್ಷೇಪಣೆ ಆಹ್ವಾನ


 ರಾಷ್ಟಿçಯ ಆರೋಗ್ಯ ಅಭಿಯಾನ ಪಿಎಂ-ಅಭಿಮ್ ಸ್ಪರ್ಶ್ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ವೈದ್ಯಕೀಯ(Doctor), ಅರೆ ವೈದ್ಯಕೀಯ ಮತ್ತು ಶುಶ್ರೂಷಕ(nurse) ಹುದ್ದೆಗಳ(jobs) ಭರ್ತಿಗೆ ಮೂಲ ದಾಖಲಾತಿ ಪರಿಶೀಲನೆ ನಡೆಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.


 ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ರೋಸ್ಟರ್ ಕಂ ಮೆರಿಟ್ ಆಧಾರದಲ್ಲಿ ಪ್ರಕಟಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಲಿಖಿತ ರೂಪದಲ್ಲಿ ದಿ: 17-02-2025 ರಿಂದ 7 ದಿನಗಳ ಒಳಗೆ ದಿ: 24-02-2025 ರ ಸಂಜೆ 5.30 ರೊಳಗೆ ಜಿಲ್ಲಾ ಆರ್‌ಸಿಹೆಚ್ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಎನ್‌ಯುಹೆಚ್‌ಎಂ ವಿಭಾಗಕ್ಕೆ ಸಲ್ಲಿಸುವುದು. ಆನಂತರ ಬಂದ ಆಕ್ಷೇಪಣೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿಗಳು ತಿಳಿಸಿದ್ದಾರೆ.

Post a Comment

Previous Post Next Post