ಸಾಗರ ಮತ್ತು ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ, ಓರ್ವನ ಸ್ಥಿತಿ ಗಂಭೀರ, ಮತ್ತೊಂದು ಪ್ರಕರಣದಲ್ಲಿ ವಾಹನ ನುಜ್ಜುಗುಜ್ಜು

 

ಸಾಗರ ಮತ್ತು ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದೆ. ಸಾಗರದಲ್ಲಿ ನಡೆದ ಅಫಘಾತದಲ್ಲಿ ವ್ಯಕ್ತಿಯೋರ್ವರ ಸ್ಥಿತಿ ಗಂಭೀರವಾಗಿದ್ದರೆ ನಗರದಲ್ಲಿ ನಡೆದ ಅಪಘಾತದಲ್ಲಿ ಓಮಿನಿ ನುಜ್ಜುಗುಜ್ಹಾಗಿದೆ. 


ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ನಿನ್ನೆ ರಾತ್ರಿ ವೇಳೆ ವಿ ಆರ್ ಎಲ್ ಲಾರಿ ಹಾಗೂ ಓಮಿನಿ ನಡುವೆ ಅಪಘಾತ ಸಂಭವಿಸಿದೆ. ಓಮಿನಿ ವಾಹನ ನುಜ್ಜುಗುಜ್ಜಾಗಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಓಮಿನಿ ಡ್ರೈವರ್ ಗೆ ಸಣ್ಣ ಪುಟ್ಟ ಗಾಯಗಳಾಗಿವೆ. 


ಸಾಗರದಲ್ಲಿ ಅಪಘಾತ


ಸಾಗರದ ಬಿ ಹೆಚ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದ್ದು ಓರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಹಿರೋ ಹೋಂಡಾ ಶೋ ರೂಂ ಸಮೀಪ ದ್ವಿಚಕ್ರ ವಾಹನಕ್ಕೆ ಕಾರು ಒಂದು ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನದಲ್ಲಿ ಇದ್ದ ಇಬ್ಬರೂ ಯುವಕರಲ್ಲಿ ಒರ್ವನಿಗೆ ಗಂಭೀರ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ, ಮತ್ತೋರ್ವ ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.


                  ಸಾಗರದಲ್ಲಿ ನಡೆದ ರಸ್ತೆ ಅಪಘಾತ


ಅಪಘಾತ ಪಡಿಸಿದ ಕಾರು ಬೆಂಗಳೂರು ಮೂಲದ ವ್ಯಕ್ತಿಗೆ ಸಂಬಂಧಿಸಿದೆ, ಹಾಗೂ ಅಪಘಾತಕ್ಕೆ ಒಳಗಾದ ಯುವಕರು ಸಾಗರ ನಗರದ ಅಂಬೇಡ್ಕರ್ ಕಾಲೋನಿ ನಿವಾಸಿಗಳು ಎಂದು ತಿಳಿದುಬಂದಿದೆ. ಸಾಗರ ಪೇಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಯಾಗಿದ್ದು ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Post a Comment

Previous Post Next Post