Sexual assault-ಆರೋಪಿಗೆ ಕಠಿಣ ಕಾರಾಗೃಹವಾಸ ಶಿಕ್ಷೆ

 

ಭದ್ರಾವತಿ ನಗರದಲ್ಲಿ 2022 ರಲ್ಲಿ ಅಪ್ರಾಪ್ತೆಯ ಮೇಲೆ 19 ವರ್ಷದ ಯುವಕ ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ದಂಡವಿಧಿಸಿ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಆದೇಶಿಸಿದೆ. 


15 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿದ ನೊಂದ ಬಾಲಕಿ ನೀಡಿದ ದೂರಿನ ಮೇರೆಗೆ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ಆಗಿನ ತನಿಖಾಧಿಕಾರಿಗಳಾದ ಸಿಪಿಐ ರಾಘವೇಂದ್ರ ಕಾಂಡಿಕೆ, ಪ್ರಕರಣದ ತನಿಖೆ ಪೂರೈಸಿ, ಘನ ನ್ಯಾಯಾಲಯಕ್ಕೆ ಆರೋಪಿಯ ವಿರುದ್ಧ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. 


ಘನ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಶ್ರೀಧರ್ ಹೆಚ್. ಆರ್, ಸರ್ಕಾರಿ ಅಭಿಯೋಜಕರವರು ವಾದ ಮಂಡಿಸಿದ್ದು, ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ FTSC-1 ಶಿವಮೊಗ್ಗದಲ್ಲಿ ಪ್ರಕರಣದ ವಿಚಾರಣೆ ನಡೆದು, ಆರೋಪಿಯ ವಿರುದ್ಧ ಆರೋಪ ದೃಡ ಪಟ್ಟ ಹಿನ್ನೆಲೆಯಲ್ಲಿ, ಮಾನ್ಯ ನ್ಯಾಯಾಧೀಶರಾದ ಶ್ರೀ ಮೋಹನ್ ಜೆ. ಎಸ್ ರವರು ದಿನಾಂಕಃ 24-02-2025 ರಂದು ಪ್ರಕರಣದ ಆರೋಪಿ ಭದ್ರಾವತಿ ನಗರದ 19 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ರೂ 2,01,000/- ದಂಡ, ದಂಡ ಕಟ್ಟಲು ವಿಫಲನಾದಲ್ಲಿ 01 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು, ಪರಿಹಾರ ರೂಪವಾಗಿ ದಂಡದ ಮೊತ್ತದಲ್ಲಿ 2,00,000/- ಮತ್ತು ಸರ್ಕಾರದಿಂದ 2 ಲಕ್ಷರೂಗಳನ್ನು ನೊಂದ ಬಾಲಕಿಗೆ ನೀಡಲು ಆದೇಶಿಸಿರುತ್ತಾರೆ.

Post a Comment

Previous Post Next Post