Power-outage-on-March-14th-ಮಾ.14 ಕ್ಕೆ ವಿದ್ಯುತ್ ವ್ಯತ್ಯಯ

 

ಶಿವಮೊಗ್ಗದ ಹೊರ ಮತ್ತು ನಗರ ಭಾಗದ ಹಲವೆಡೆ ವಿದ್ಯುತ್ ವ್ಯತ್ಯಯ ಆಗಲಿದೆ. ಮಾ.14 ರಂದು, ಕೆಲ ಭಾಗದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ಶಿವಮೊಗ್ಗ 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನಲೆಯಲ್ಲಿ ಮತ್ತಷ್ಟು ಭಾಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 


ಕೂಡ್ಲಿ, ಚಿಕ್ಕೂಡ್ಲಿಯ ಸುತ್ತಮುತ್ತ ವಿದ್ಯುತ್ ವ್ಯತ್ಯಯ


ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾರ್ಚ್ 14 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 


ಮಾ.14 ರಂದು ಕುವೆಂಪು ನಗರ, ಎನ್ಎಎಸ್ ಬಡಾವಣೆ ಮತ್ತು ಸುತ್ತಮುತ್ತ ವಿದ್ಯುತ್ ವ್ಯತ್ಯಯ


ಶಿವಮೊಗ್ಗ 220 ಕೆವಿ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮಾ.14 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್‌ನಗರ, ಎಲ್.ಬಿ.ಎಸ್.ನಗರ, ಹೊನ್ನಾಳಿ ರಸ್ತೆ, ತ್ಯಾವರೆಚಣ್ನಹಳ್ಳಿ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ

Post a Comment

Previous Post Next Post